ನವದೆಹಲಿ: ಲೋಕಸಭೆ ಚುನಾವಣೆ 2024 ಕ್ಕೆ ಕೇಂದ್ರ ಚುನಾವಣಾ ಆಯೋಗ ಇಂದು ವೇಳಾಪಟ್ಟಿ ಪ್ರಕಟಿಸಿದೆ. 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಎಪ್ರಿಲ್ 19 ಮೊದಲ ಹಂತ, ಎ. 26 ಎರಡನೇ ಹಂತ, ಮೇ.7 ಮೂರನೇ ಹಂತ, ಮೇ 13 ನಾಲ್ಕನೇ ಹಂತ, ಮೇ.20 ಐದನೇ ಹಂತ, ಮೇ 25 ಆರನೇ ಹಂತ, ಜೂನ್ 1 ಏಳನೇ ಹಂತದ
ಚುನಾವಣೆ ನಡೆಯಲಿದೆ. ಜೂ.4 ರಂದು ಮತ ಎಣಿಕೆ ನಡೆಯಲಿದ. ಕರ್ನಾಟದದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಎರಡನೇ ಹಂತ ಎ.26 ರಂದು ಕರ್ನಾಟಕದಲ್ಲಿ ಮೊದಲ ಹಂತದಲ್ಲಿ ಮತ್ತು ಮೇ.7 ರಂದು ಮೂರನೇ ಹಂತದಲ್ಲಿ ಕರ್ನಾಟಕದಲ್ಲಿ ಎರಡನೇ ಹಂತದ ಚುನಾವಣೆ ನಡೆಯಲಿದೆ.
ಲೋಕಸಭಾ ಚುನಾವಣೆಯ ವೇಳಾಪಟ್ಟಿ ಘೋಷಣೆಯನ್ನು ಕೇಂದ್ರ ಚುನಾವಣಾಧಿಕಾರಿಗಳು ನವದೆಹಲಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಪ್ರಕಟ ಮಾಡಿದರು.
ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರ ಜೊತೆ ಚುನಾವಣಾ ಆಯೋಗದ ನೂತನ ಸದಸ್ಯರಾದ ಜ್ಞಾನೇಶ್ ಕುಮಾರ್ ಹಾಗೂ ಸುಖಬೀರ್ ಸಿಂಗ್ ಇದ್ದಾರೆ. ದೇಶದಲ್ಲಿ ಸುಮಾರು 97 ಕೋಟಿ ಮತದಾರರು ಇದ್ದಾರೆ
1.80 ಕೋಟಿ ಮತದಾರರು ಮೊದಲ ಬಾರಿಗೆ ಮತ ಚಲಾಯಿಸಲಿದ್ದಾರೆ
10.05 ಲಕ್ಷ ಮತಗಟ್ಟೆಗಳನ್ನು ಸಿದ್ಧಪಡಿಸಲಾಗುವುದು. 1.5 ಕೋಟಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಈ ಚುನಾವಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ. 55 ಲಕ್ಷ ಮತ ಯಂತ್ರಗಳನ್ನು ಬಳಸಲಾಗುವುದು
543 ಲೋಕಸಭಾ ಕ್ಷೇತ್ರ. ಮುಕ್ತ, ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ಸಂಪೂರ್ಣ ತಯಾರಿಯಾಗಿದೆ ಎಂದು ರಾಜೀವ್ ಕುಮಾರ್ ತಿಳಿಸಿದರು.









