ನವದೆಹಲಿ; ಲೋಕಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಂದುವರಿದಿದ್ದು ಇತ್ತೀಚಿನ ಮಾಹಿತಿ ಪ್ರಕಾರ ಎನ್ಡಿಎ ಮತ್ತು ಇಂಡಿಯಾ ಒಕ್ಕೂಟದ ಮಧ್ಯೆ ತೀವ್ರ ಪೈಪೋಟಿ ಕಂಡು ಬಂದಿದೆ. ಬಿಜೆಪಿ ನೇತೃತ್ವದ ಎನ್ಡಿಎ 289 ಕ್ಷೇತ್ರಗಳಲ್ಲಿ ಹಾಗೂ ಇಂಡಿಯಾ ಮೈತ್ರಿಕೂಟ 233 ಕ್ಷೇತ್ತದಲ್ಲಿ ಮುನ್ನಡೆ ಸಾಧಿಸಿದೆ. ಇತರರು 21 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಹಲವು ಕ್ಷೇತ್ರಗಳಲ್ಲಿ ನೆಕ್ ಟು ನೆಕ್ ಫೈಟ್ ಕಂಡು ಬಂದಿದ್ದು ಯಾವುದೇ ಕ್ಷಣದಲ್ಲಿ ಬಹುಮತದ ಚಿತ್ರಣ ಬದಲಾವಣೆಯ ಸಾಧ್ಯತೆ ಇದೆ.