ಸುಳ್ಯ: ಲಾರಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ವಿದ್ಯುತ್ ಕಂಬ ತುಂಡಾಗಿ ಸುಳ್ಯಕ್ಕೆ ವಿದ್ಯುತ್ ಸರಬರಾಜು ಸ್ಥಗಿತಗೊಂಡಿದೆ. ಮಾಡಾವು-ಸುಳ್ಯ 33 ಕೆವಿ ವಿದ್ಯುತ್ ಲೈನ್ಗೆ ಅಡ್ಕಾರ್ ಬಳಿ ಲಾರಿ ಡಿಕ್ಕಿ ಹೊಡೆದಿದ್ದು ಬೆಳಗ್ಗಿನಿಂದ ವಿದ್ಯುತ್ ಸರಬರಾಜು ಸ್ಥಗಿತಗೊಂಡಿದೆ. ದುರಸ್ತಿ ಕಾರ್ಯ ನಡೆಯುತ್ತಿದ್ದು 11 ಗಂಟೆಯ ಬಳಿಕ ವಿದ್ಯುತ್ ಸರಬರಾಜು ಸರಿಯಾಗಲಿದೆ ಎಂದು ಮೆಸ್ಕಾಂ ಇಂಜಿನಿಯರ್ ತಿಳಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.