ನವದೆಹಲಿ: ಏಳು ಹಂತದಲ್ಲಿ ನಢಯುವ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ನಾಳೆ(ಏ.26ರಂದು) ನಡೆಯಲಿದೆ. ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರ ಸೇರಿದಂತೆ 12 ರಾಜ್ಯಗಳಲ್ಲಿ ಶುಕ್ರವಾರ ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ. ಬೆಳಗ್ಗೆ
7ರಿಂದ ಸಂಜೆ 6ಗಂಟೆಯವರೆಗೆ ಮತದಾನ ನಡೆಯಲಿದೆ.
ಎರಡನೇ ಹಂತದಲ್ಲಿ ಕೇರಳದ 20, ಕರ್ನಾಟಕದ 14, ರಾಜಸ್ಥಾನದ 13, ಉತ್ತರಪ್ರದೇಶದ 8, ಮಹಾರಾಷ್ಟ್ರದ 8, ಮಧ್ಯಪ್ರದೇಶದ 6, ಅಸ್ಸಾಂನ 5 ಲೋಕಸಭಾ ಸ್ಥಾನಗಳು ಸೇರಿದಂತೆ 89 ಕ್ಷೇತ್ರಗಳಿ ಚುನಾವಣೆ ನಡೆಯಲಿದೆ. ಎರಡನೇ ಹಂತದ ಮತದಾನ ನಡೆಯುವ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರ ಬುಧವಾರ ಸಂಜೆ ಕೊನೆಗೊಂಡಿತ್ತು.
ಚುನಾವಣೆ ಆಯೋಗ ಮತದಾನಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 14 ಕ್ಷೇತ್ರಗಳಲ್ಲಿ ನಾಳೆ ಮತದಾನ ನಡೆಯಲಿದೆ. ಉಳಿದ 14 ಕ್ಷೇತ್ರಗಳಲ್ಲಿ ಮೇ.7ರಂದು ಚುನಾವಣೆ ನಡೆಯಲಿದೆ. ಕೇರಳದ 20 ಕ್ಷೇತ್ರಗಳಲ್ಲಿ ನಾಳೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.