ಪೇರಡ್ಕ:ಸಮಾಜವನ್ನು ಮಾರಕವಾಗಿ ಬಾಧಿಸುತ್ತಿರುವ ಮಾದಕ ವ್ಯಸನದ ವಿರುದ್ಧ ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್ ಹಮ್ಮಿಕೊಂಡಿರುವ ಅಭಿಯಾನದ ಭಾಗವಾಗಿ ಪೇರಡ್ಕ ತೆಕ್ಕಿಲ್ ಮುಹಮ್ಮದ್ ಹಾಜಿ ಮೆಮೊರಿಯಲ್ ತಖ್ವಿಯತುಲ್ ಇಸ್ಲಾಂ ಮದ್ರಸಾ ಮತ್ತು ಹಯಾತುಲ್ ಇಸ್ಲಾಂ ಮದ್ರಸಾ ಗೂನಡ್ಕ ಇದರ ವಠಾರದಲ್ಲಿ ವಿದ್ಯಾರ್ಥಿಗಳ
ವಿಶೇಷ ಅಸೆಂಬ್ಲಿ, ಪ್ರತಿಜ್ಞಾ ಸ್ವೀಕಾರ ನಡೆಯಿತು. ಮಾದಕ ದ್ರವ್ಯಗಳ ಸಂಪೂರ್ಣ ನಿಷೇಧಕ್ಕೆ ಆಗ್ರಹಿಸಿ ಮುಖ್ಯಮಂತ್ರಿಗೆ ಸಲ್ಲಿಸುವ ಮನವಿ ಪತ್ರಕ್ಕೆ ಸಹಿ ಸಂಗ್ರಹ ಮಾಡಲಾಯಿತು. ಸ್ಥಳೀಯ ಖತೀಬರಾದ ಅಹ್ಮದ್ ನಈಂ ಫೈಝಿ ಅಲ್ ಮಅಬರಿ, ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ.ಕೆ ಹಮೀದ್ ಗೂನಡ್ಕ ಕಾರ್ಯದರ್ಶಿ ಕೆ.ಎಂ ಉಸ್ಮಾನ್ ಅರಂತೋಡು ಮಾತನಾಡಿದರು. ಮಾದಕ ವಸ್ತುಗಳ ಬಳಕೆಯಿಂದ ದೂರ ನಿಲ್ಲುವ ಮತ್ತು ಮಾದಕ ವ್ಯಸನದ ಪಿಡುಗನ್ನು ತೊಡೆದು ಹಾಕುವ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಭೋದಿಸಲಾಯಿತು. ಮಾದಕ ಪಧಾರ್ಥಗಳನ್ನು ಸಂಪೂರ್ಣವಾಗಿ ನಿಷೇಧಿಸಬೇಕೆಂದು ಮುಖ್ಯಮಂತ್ರಿಗಳಿಗೆ ಸಲ್ಲಿಸುವ ಮನವಿ ಪತ್ರಕ್ಕೆ ವಿದ್ಯಾರ್ಥಿಗಳಿಂದ ಸಹಿ ಸಂಗ್ರಹಣೆ ಮಾಡಲಾಯಿತು. ಮದ್ರಸಾ ಸಹ ಅಧ್ಯಾಪಕರಾದ ಹಾರಿಸ್ ಕಾಮಿಲ್ ಅಝ್ಹರಿ ಮತ್ತು ಶಾಕಿರ್ ಮುಸ್ಲಿಯಾರ್ ಪೋಳ್ಯ, ಜಮಾಅತ್ ಉಪಾಧ್ಯಕ್ಷರಾದ ಹನೀಫ್ ಟಿ.ಬಿ, ಎಸ್ಕೆಎಸ್ಎಸ್ಎಫ್ ಗೂನಡ್ಕ ಶಾಖೆ ಅಧ್ಯಕ್ಷರಾದ ಮುನೀರ್ ದಾರಿಮಿ ಉಪಸ್ಥಿತರಿದ್ದರು.





