ಸುಳ್ಯ:ಸುಳ್ಯದ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ
ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ ನಡೆಯಿತು. ಮಾದಕ ವಸ್ತುಗಳ ಉಪಯೋಗ ಮತ್ತು ಆಕ್ರಮ ಕಳ್ಳ ಸಾಗಣೆ ವಿರುದ್ಧದ ಅಂತರರಾಷ್ಟ್ರೀಯ ದಿನದ ಅಂಗವಾಗಿ ನಶಾ ಮುಕ್ತ ಭಾರತ ಅಭಿಯಾನದ

ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ಕೆ.ದಯಾಮಣಿ ವಿದ್ಯಾರ್ಥಿಗಳಿಗೆ ಹಾಗೂ ಬೋಧಕ ವೃಂದದವರಿಗೆ ಬೋಧಿಸಿದರು. ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಪ್ರತಿಜ್ಞೆ ಸ್ವೀಕರಿಸಿದರು.