ಸುಳ್ಯ: ಅರೆಭಾಷೆ ಅಕಾಡೆಮಿಯ ಸ್ಥಾಪನೆ ಬಳಿಕ ಅರೆಭಾಷೆಗೆ ಗೌರವ ಬಂದಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಪಿ.ಸಿ.ಜಯರಾನ ಹೇಳಿದರು.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ ಗ್ರಾಮ ಗೌಡ ಸಮಿತಿ ಹಾಗೂ ಗೌಡ ಮಹಿಳಾ ಘಟಕ ಮಡಪ್ಪಾಡಿ ಇದರ ಸಹಯೋಗದಲ್ಲಿ ಮಡಪ್ಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಗೋಲ್ಯಾಡಿ ತಮ್ಮಪ್ಪ ಗೌಡ ರಂಗಮಂದಿರದಲ್ಲಿ ನಡೆದ
ಅರೆಬಾಷೆ ಗ್ರಾಮೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಗ್ರಾಮೋತ್ಸವ ಕಾರ್ಯಕ್ರಮಗಳ ಮೂಲಕ ಅರೆ ಭಾಷೆ ಸಂಸ್ಕೃತಿ ಉಳಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು.
ದ.ಕ. ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ವಿನಯ್ ಮುಳುಗಾಡು, ವಳಲಂಬೆ ದೇವಸ್ಥಾನದ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಿತ್ರ ದೇವ ಮಡಪ್ಪಾಡಿ, ಸುಳ್ಯ ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್. ಗಂಗಾಧರ, ಮಡಪ್ಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಸದಾನಂದ ಬಲ್ಕಜೆ, ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ನಿತ್ಯಾನಂದ ಬಳ್ಳಡ್ಕ, ಕಾರ್ಯಕ್ರಮದ ಸದಸ್ಯ ಸಂಚಾಲಕಿ ಲತಾ ಪ್ರಸಾದ್ ಕುದ್ಪಾಜೆ, ಅಕಾಡೆಮಿ ಸದಸ್ಯರಾದ ತೇಜಕುಮಾರ್ ಕುಡೆಕಲ್ಲು, ಚಂದ್ರಶೇಖರ ಪೇರಾಲು, ಚಂದ್ರಾವತಿ ಬಡ್ಡಡ್ಕ, ಪಿ.ಎಸ್.ಕಾರ್ಯಪ್ಪ, ಸೂದನ ಎಸ್. ಈರಪ್ಪ, ಮೋಹನ್ ಪೊನ್ನಚನ, ಗೋಪಾಲ್ ಪೆರಾಜೆ, ಗ್ರಾಮೋತ್ಸವ ಸಂಘಟನಾ ಸಮಿತಿ ಅಧ್ಯಕ್ಷ ಗಂಗಯ್ಯ ಗೌಡ ಪೂಂಬಾಡಿ, ಕಾರ್ಯದರ್ಶಿ ಗೋಪಾಲಕೃಷ್ಣ ಪಾರೆಮಜಲು ಮತ್ತಿತರರು ಉಪಸ್ಥಿತರಿದ್ದರು.ಗ್ರಾಮೋತ್ಸವ ಕಾರ್ಯಕ್ರಮದ ಸಂಘಟನಾ ಸಮಿತಿ ಸಂಯೋಜಕ ಸೋಮಶೇಖರ ಕೇವಳ ಸ್ವಾಗತಿಸಿದರು. ಉದಯಭಾಸ್ಕರ್ ಸುಳ್ಯ ಹಾಗೂ ದಿನೇಶ್ ಮಡಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು. ಜಯರಾಮ ಹಾಡಿಕಲ್ಲು ವಂದಿಸಿದರು.ಸಮಾರಂಭಕ್ಕೂ ಮೊದಲು ಮಡಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಮೆರವಣಿಗೆ ನಡೆಯಿತು.
ನಿತ್ಯಾನಂದ ಬಳ್ಳಡ್ಕ ಮೆರವಣಿಗೆಗೆ ಚಾಲನೆ ನೀಡಿದರು. ಪ್ರಾತ್ಯಕ್ಷಿಕೆಗಳಿಗೆ ಕೇಪಣ್ಣ ಗೌಡ ಚಾಲನೆ ನೀಡಿದರು.









