ಮಡಪ್ಪಾಡಿ: ಕೆವಿಜಿ ಸುಳ್ಯಹಬ್ಬ ಸಮಾಜ ಸೇವಾ ಸಂಘ, ಕೆ ವಿಜಿ ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಆಸ್ಪತ್ರೆ, ಕೆವಿಜಿ ಆಯುರ್ವೇದ ಮಹಾ ವಿದ್ಯಾಲಯ ಹಾಗು ಮಡಪ್ಪಾಡಿಯ ವಿವಿದ ಸಂಘಟನೆಗಳ ಸಹಕಾರದೊಂದಿಗೆ ಮಡಪ್ಪಾಡಿಯಲ್ಲಿ ಬೃಹತ್ ಉಚಿತ ವೈದ್ಯಕೀಯ ಶಿಬಿರವನ್ನು ನಡೆಸಲಾಯಿತು. ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಜಯರಾಮ ಉದ್ಘಾಟಿಸಿದರು. ಸಮಾರಂಭದಲ್ಲಿ
Lಸುಳ್ಯ ತಾಲೂಕು ಆರೊಗ್ಯಾಧಿಕಾರಿ ಡಾ.ನಂದಕುಮಾರ್ ಅವರನ್ನು ಸನ್ಮಾನಿಸಲಾಯಿತು.ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅಧ್ಯಕ್ಷ ಚಂದ್ರಶೇಖರ ಪೇರಾಲು ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಮಾಜಿ ಅಧ್ಯಕ್ಷರಾದ ನಿತ್ಯಾನಂದ ಮುಂಡೋಡಿ, ಪಿ.ಸಿ. ಜಯರಾಮ, ಶಾಲಾಭಿವ್ರದ್ದಿ ಸಮಿತಿ ಅದ್ಯಕ್ಷ ಸಚಿನ್ ಬಳ್ಳಡ್ಕ, ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಕಾರ್ಯದರ್ಶಿ ದಿನೇಶ್ ಅಂಬೆಕಲ್ಲು, ಕೋಶಾಧಿಕಾರಿ ಜನಾರ್ದನ್ ನಾಯ್ಕ್, ಪ್ರಮುಖರಾದ ಲೋಹಿತ್ ಮಡಪ್ಪಾಡಿ, ಡಾ ಗೀತಾ ದೊಪ್ಪ, ಡಾ. ಹರ್ಷಿತಾ ಪುರುಷೊತ್ತಮ್, ಕಿರಣ್ ಶೀರಡ್ಕ, ಶಕುಂತಲಾ ಕೇವಳ, ವಾಣಿ ಮುಳುಗಾಡು, ದುಶ್ಯಂತ್ ಶೀರಡ್ಕ, ಎಂ.ಜಿ ಲೋಕಯ್ಯ ಜಯರಾಮ್ ಕಡ್ಲಾರು ಉಪಸ್ತಿತರಿದ್ದರು. ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಶಾಲೆಯ ಗ್ರಂಥಾಲಯಕ್ಕೆ ಪುಸ್ತಕಗಳನ್ನು ನೀಡಲಾಯಿತು. ದಿನೇಶ್ ಮಡಪ್ಪಾಡಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಮುಖ್ಯ ಶಿಕ್ಷಕ ಜಗದೀಶ್ ವಂದಿಸಿದರು. ಶಾಲಾ ಶಿಕ್ಷಕ ಕುಶಾಲಪ್ಪ ಕಾರ್ಯಕ್ರಮ ನಿರೂಪಿಸಿದರು.