ಮಂಗಳೂರು:ಹಿರಿಯ ಪತ್ರಕರ್ತ ಶ್ರೀನಿವಾಸ ನಾಯಕ್ ಇಂದಾಜೆ ಅವರಿಗೆ ಮಾಧ್ಯಮ ರಂಗದ ಸಾಧಕ ಪ್ರಶಸ್ತಿ ಲಭಿಸಿದೆ.ನಗರದ ಕರಾವಳಿ ಉತ್ಸವ ಮೈದಾನದಲ್ಲಿ ನವೆಂಬರ್ 16 ರಂದು ನಡೆಯಲಿರುವ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಪತ್ರಕರ್ತರ ಗ್ರಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ನಿರ್ದೇಶಕ,ಪ್ರತಿನಿಧಿ ಪತ್ರಿಕೆಯ ಮಂಗಳೂರು ವಿಭಾಗದ
ಸ್ಥಾನಿಯ ಸಂಪಾದಕ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಮಾಧ್ಯಮ ರಂಗದ ಸಾಧಕ ಪ್ರಶಸ್ತಿ ಪುರಸ್ಕಾರ ನಡೆಯಲಿದೆ.ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಡಾ ಎಂ. ಎನ್. ರಾಜೇಂದ್ರ ಕುಮಾರ್ ವಿಧಾನ ಸಭೆ ಸಭಾಪತಿ ಯು. ಟಿ. ಖಾದರ್, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಅರೋಗ್ಯ ಸಚಿವ ದಿನೇಶ್ ಗುಂಡೂರಾವ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಹಾಗೂ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆ ಖಾತೆ ಸಚಿವೆ ಲಕ್ಶ್ಮೀ ಹೆಬ್ಬಾಳ್ಕರ್ ಉಪಸ್ಥಿತಿ ಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ಶ್ರೀನಿವಾಸ್ ನಾಯಕ್ ಇಂದಾಜೆ ಅವರು ಉದಯ ಟಿವಿ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಳೆದ ಎರಡು ದಶಕಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಶ್ರೀನಿವಾಸ್ ಅವರು ರಾಜ್ಯ ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಆಯ್ಕೆ ಸಮಿತಿ ಸದಸ್ಯರು ಆಗಿದ್ದಾರೆ.





