ಪಂಜ:ಮದ್ಯವರ್ಜನ ಶಿಬಿರದ ಪೂರ್ವಭಾವಿ ಸಭೆ ಪಂಜ ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಲಯ ಅಧ್ಯಕ್ಷ ಮೋನಪ್ಪ ಗೌಡ ಬೊಳ್ಳಾಜೆ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ವಿಶ್ವನಾಥ ರೈ ಕಳಂಜ ನೆರವೇರಿಸಿದರು. ತಾಲೂಕು
ಯೋಜನಾಧಿಕಾರಿ ಮಾಧವ ಗೌಡ ಪ್ರಾಸ್ತವಿಕವಾಗಿ ಮಾತನಾಡಿ ಮದ್ಯವರ್ಜನ ಶಿಬಿರದ ರೂಪುರೇಷೆಗಳನ್ನು ತಿಳಿಸಿದರು. ಮದ್ಯವರ್ಜನ ಶಿಬಿರದ ಸಮಿತಿ ರಚನೆ ಹಾಗೂ ಶಿಬಿರಾರ್ಥಿಗಳ ಆಯ್ಕೆ ಬಗ್ಗೆ ಮಾಹಿತಿ ನೀಡಿದರು. ಮದ್ಯವರ್ಜನ ಶಿಬಿರದ ಅಧ್ಯಕ್ಷರಾಗಿ ಪದ್ಮನಾಭ ರೈ ಅವರನ್ನು ಆಯ್ಕೆ ಮಾಡಿ ಸಮಿತಿ ರಚಿಸಲಾಯಿತು. ಕಾರ್ಯಕ್ರಮದಲ್ಲಿ
ವಲಯ ಒಕ್ಕೂಟಗಳ ಅಧ್ಯಕ್ಷ ಧರ್ಮಪಾಲ ಕಣ್ಕಲ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ತಾಲೂಕು ಮಾಜಿ ಅಧ್ಯಕ್ಷೆ ವಿಮಲ ರಂಗಯ್ಯ, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಜಿಲ್ಲಾ ಸದಸ್ಯ ಶಿವಪ್ರಸಾದ್ ಮಾದನಮನೆ,ದಕ್ಷಿಣ ಕನ್ನಡ ಹಾಲು ಉತ್ಪಾದಕ ಸಹಕಾರಿ ಸಂಘದ ನಿರ್ದೇಶಕ ಭರತ್ ನೆಕ್ರಾಜೆ,ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಬಾಲಕೃಷ್ಣ ಪುತ್ಯ, ಕುಮಾರ್ ಪುರ್ಲುಂಪಾಡಿ, ಅರುಣ್ ರೈ ಗೆಜ್ಜೆ,ವಾಸುದೇವ ಕೆರೆಕ್ಕೋಡಿ,ಚಂದ್ರಶೇಖರ ಕಟ್ಟ, ಮಹಾಬಲ ಗುಡ್ಡೆಮನೆ, ವಿಶ್ವನಾಥ ಕಲ್ಲೆಂಬಿ, ಒಕ್ಕೂಟಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಭಜನಾ ಪರಿಷತ್ತಿನ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಶೌರ್ಯ ವಿಪತ್ತು ಘಟಕದ ಸದಸ್ಯರು, ನವ ಜೀವನ ಸಮಿತಿ ಸದಸ್ಯರು, ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.. ಕಾರ್ಯಕ್ರಮವನ್ನು ಮೇಲ್ವಿಚಾರಕರದ ಮಮತಾ ನಿರೂಪಿಸಿದರು..










