ಬೆಳ್ಳಾರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಸುಳ್ಯ ತಾಲೂಕು ಬೆಳ್ಳಾರೆ ವಲಯ ಇದರ ವತಿಯಿಂದ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆದ 1812 ನೇ ಮದ್ಯವರ್ಜನ ಶಿಬಿರ ಸಮಾಪನಗೊಂಡಿತು. ಮುಖ್ಯ ಅತಿಥಿಯಾಗಿದ್ದ ಮಾಜಿ ಸಚಿವರಾದ ಬಿ.ರಮಾನಾಥ ರೈ ಮಾತನಾಡಿ ಕುಡಿತದ ಚಟದಿಂದ ಹೊರಗೆ
ಬರಬೇಕು.ನವಜೀವನಕ್ಕೆ ಪಾದಾರ್ಪಣೆ ಮಾಡಬೇಕು ಉತ್ತಮವಾಗಿ ಜೀವನ ನಡೆಸಬೇಕು ಎಂದು ಅವರು ಹೇಳಿದರು.
ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷೆ ಮ ರಾಜೀವಿ ಆರ್.ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ವೇದಿಕೆಯಲ್ಲಿ ಶಾಸಕಿ ಭಾಗೀರಥಿ ಮುರುಳ್ಯ,ಮಾಜಿ ಸಚಿವ ಎಸ್.ಅಂಗಾರ,
ಅಖಿಲ ಕರ್ನಾಟಕ ಜನಜಾಗೃತಿ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ,ತಾಲೂಕು ಅಧ್ಯಕ್ಷ ಲೋಕನಾಥ ಅಮೆಚೂರು,ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು, ಜನಜಾಗೃತಿ ವೇದಿಕೆಯ ನಿಕಟಪೂರ್ವ ಜಿಲ್ಲಾಧ್ಯಕ್ಷ ಎನ್.ಎ.ರಾಮಚಂದ್ರ,ಸುಳ್ಯ ಸೇವಾ ಭಾರತಿ ಹೆಲ್ಪ್ ಲೈನ್ ಉಪಾಧ್ಯಕ್ಷ ಆರ್.ಕೆ.ಭಟ್ ಕುರುಂಬುಡೇಲು, ಬೆಳ್ಳಾರೆ ಪೊಲೀಸ್ ಠಾಣೆ ಉಪನಿರೀಕ್ಷಕ ಸಂತೋಷ್ ಬಿ, ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷ ಸುರೇಶ್ ಕಣೆಮರಡ್ಕ, ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರಾದ ವಿಮಲ ರಂಗಯ್ಯ, ಮಹೇಶ್ ಮೇನಾಲ, ಪದ್ಮನಾಭ ಜೈನ್, ಯೋಗಗುರು ಗಣಪಯ್ಯ ಭಟ್,ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ಯೋಜನಾಧಿಕಾರಿ ಗಣೇಶ್ ಆಚಾರ್ಯ,ಶಿಬಿರಾಧಿಕಾರಿ ನಂದಕುಮಾರ್,ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷ ಆನಂದ ಗೌಡ ಪೆರಿಯಾನ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಯೋಜನಾಧಿಕಾರಿ ಮಾಧವ ಗೌಡ ಸ್ವಾಗತಿಸಿ,ಪ್ರದೀಪ್ ಕುಮಾರ್ ರೈ ಪನ್ನೆ ಮತ್ತು ಗ್ರಾಮಾಭಿವೃದ್ಧಿ ಯೋಜನೆಯ ಬೆಳ್ಳಾರೆ ವಲಯದ ಮೇಲ್ವಿಚಾರಕಿ ವಿಶಾಲ ಕೆ.ಕಾರ್ಯಕ್ರಮ ನಿರೂಪಿಸಿದರು.