ಪಂಜ:ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆದ ಮದ್ಯವರ್ಜನ ಶಿಬಿರ ಸಮಾಪನಗೊಂಡಿತು. ಸಮಾರೋಪ ಸಮಾರಂಭದಲ್ಲಿ ಶಿಬಿರದ ಯಶಸ್ವಿಗೆ ಸಹಕರಿಸಿದ ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ಮದ್ಯವರ್ಜನ ಶಿಬಿರದ
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ರೈ ಅಗೋಳಿಬೈಲು, ಧರ್ಮಪಾಲ ಕಣಕ್ಕಲ್ ಅವರನ್ನು ಸನ್ಮಾನಿಸಲಾಯಿತು. ಮಾಜಿ ಸಚಿವ ಎಸ್.ಅಂಗಾರ ಸನ್ಮಾನ ನೆರವೇರಿಸಿದರು.ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್, ಮಾಜಿ ಜಿಲ್ಲಾ ಅಧ್ಯಕ್ಷ ಎನ್.ಎ.ರಾಮಚಂದ್ರ, ಅಧ್ಯಕ್ಷ ವಿಶ್ವನಾಥ ರೈ ಕಳಂಜ, ತಾಲೂಕು

ಅಧ್ಯಕ್ಷ ಎಂ.ವೆಂಕಪ್ಪ ಗೌಡ, ಪ್ರಮುಖರಾದ ಬೂಡು ರಾಧಾಕೃಷ್ಣ ರೈ, ಡಾ.ರಾಮದಾಸ್ ಕೊಕ್ಕಡ, ವಿಶ್ವನಾಥ ಗೌಡ ಕಲ್ಲೆಂಬಿ, ರಾಮಕೃಷ್ಣ ರೈ ಮಾಲೆಂಗ್ರಿ, ಶಿವರಾಮಯ್ಯ ಕರ್ಮಜೆ, ಜಯರಾಮ ರೈ ಜಾಲ್ಸೂರು,ವಿಶ್ವನಾಥ ರೈ ಅರ್ಗುಡಿ,ಮೋನಪ್ಪ ಗೌಡ ಬೊಳ್ಳಾಜೆ, ಯೋಜನಾಧಿಕಾರಿ ಮಾಧವ ಗೌಡ,ಶಿಬಿರಾಧಿಕಾರಿ ದೇವಿಪ್ರಸಾದ್, ಶಿವಪ್ರಸಾದ್ ಮಾದನಮನೆ, ವಿಶ್ವನಾಥ ಸಂಪ, ಸತೀಶ್ ಟಿ.ಎನ್. ಮತ್ತಿತರರು ಉಪಸ್ಥಿತರಿದ್ದರು.











