ಮಡಿಕೇರಿ:ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅರೆಭಾಷೆ ಕಲೆ ಸಂಸ್ಕೃತಿಯ ಬೆಳವಣಿಗೆಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಹೇಳಿದರು. ಮಡಿಕೇರಿ ದಸರಾ ಅಂಗವಾಗಿ ಆಯೋಜಿಸಿದ ಜಾನಪದ ದಸರಾದಲ್ಲಿ ಅತಿಥಿಯಾಗಿ ಅವರು ಮಾತನಾಡಿದರು. ಮಡಿಕೇರಿ ದಸರಾ ವರ್ಷದಿಂದ ವರ್ಷಕ್ಕೆ
ವಿಜೃಂಭಣೆಯಿಂದ ನಡೆಯುತ್ತಿರುವುದು ವಿಶೇಷವಾಗಿದೆ. ಮಡಿಕೇರಿ ದಸರಾದಲ್ಲಿ ಜಾನಪದಕ್ಕೂ ಒತ್ತು ನೀಡಿರುವುದು ಶ್ಲಾಘನೀಯ ಎಂದರು. ಮಡಿಕೇರಿ ದಸರಾ ಕರಗ ಉತ್ಸವದೊಂದಿಗೆ ಆರಂಭವಾಗಿ ಮಹಿಳಾ, ಮಕ್ಕಳ, ಯುವ, ಕಾಫಿ ಹೀಗೆ ಹಲವು ದಸರಾವನ್ನು ಆಚರಿಸುತ್ತಿರುವುದು ಮೆಚ್ಚುವಂತದ್ದು ಎಂದು ಅವರು ಶ್ಲಾಘಿಸಿದರು.

ಜಾನಪದ ದಸರಾ ಉದ್ಘಾಟಿಸಿದ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ..ಎಸ್.ಪೊನ್ನಣ್ಣ ಮಾತನಾಡಿ
ಸಾಂಸ್ಕೃತಿಕ ಹಿನ್ನೆಲೆ ಇರುವ ತಮ್ಮದೇ ಆಚರಣೆ ಸಂಸ್ಕೃತಿ, ಕಲೆಗಳ ಪ್ರದರ್ಶನಕ್ಕೆ ಜಾನಪದ ದಸರಾ ಉತ್ತಮ ವೇದಿಕೆಯಾಗಿದೆ ಎಂದು ಹೇಳಿದರು.
ಕೃಷಿಕ ಮಹಿಳೆ ಭಾಗೀರಥಿ ಹುಲಿತಾಳ,ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಮಹೇಶ್ ನಾಚಯ್ಯ, ಕೊಡಗು ಜಿಲ್ಲಾ ಜಾನಪದ ಪರಿಷತ್ತು ಅಧ್ಯಕ್ಷ ಬಿ.ಜಿ.ಅನಂತಶಯನ, ಜಾನಪದ ದಸರಾ ಸಂಚಾಲಕರಾದ ಎಚ್.ಟಿ.ಅನಿಲ್, ನಗರಸಭೆ ಅಧ್ಯಕ್ಷೆ ಪಿ.ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ನಗರ ದಸರಾ ಸಮಿತಿ ಕಾರ್ಯಾಧ್ಯಕ್ಷ ಬಿ.ಕೆ.ಅರುಣ್ ಕುಮಾರ್ ಮಾತನಾಡಿದರು.

ದಸರಾ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಕುಡೆಕಲ್ ಸಂತೋಷ್, ಜಾನಪದ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ಚಂದ್ರಮೋಹನ್, ಪ್ರಕಾಶ್, ಟೋನಿ ಥಾಮಸ್, ಸುಜಲಾದೇವಿ, ಪ್ರಶಾಂತ್, ಸರ್ವೋದಯ ಸಮಿತಿ ಅಧ್ಯಕ್ಷರಾದ ಅಂಬೆಕಲ್ ಕುಶಾಲಪ್ಪ, ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಲೋಕೇಶ್ ಸಾಗರ್ ಇತರರು ಇದ್ದರು. ಜಾನಪದ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಮುನೀರ್ ಅಹ್ಮದ್ ಸ್ವಾಗತಿಸಿದರು. ಖಜಾಂಜಿ ಸಂಪತ್ ಕುಮಾರ್ ವಂದಿಸಿದರು.





