ಧರ್ಮಸ್ಥಳ:ಕೇವಲ ಬಾಯಿಮಾತಿನಿಂದ ಪರಿವರ್ತನೆ ಸಾಧ್ಯವಿಲ್ಲ. ಮಾತಿನಲ್ಲಿ ಹೇಳುವುದನ್ನು ಕಾಯಕದಲ್ಲಿ ಮಾಡಿ ತೋರಿಸಬೇಕು ಎಂದು ಬೆಳಗಾವಿ ಜಿಲ್ಲೆ ಹುಕ್ಕೇರಿಯ ಹಿರೇಮಠದ ಗುರು ಶಾಂತೇಶ್ವರ ಸಂಸ್ಥಾನದ ಪೂಜ್ಯ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಅವರು ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ 2000ನೆ ಮದ್ಯವರ್ಜನ ಶಿಬಿರದ
ಸಾವಿರಾರು ಮದ್ಯವರ್ಜಿತರ ಸಮಾವೇಶದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು.ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಎಲ್ಲವನ್ನೂ ಮಾತಿನಲ್ಲಿ ಹೇಳದೆ ಕೃತಿ ಮೂಲಕ, ಕಾಯಕದ ಮೂಲಕ ಸಮಾಜದಲ್ಲಿ ಕ್ರಾಂತಿಕಾರಿ ಪರಿವರ್ತನೆ ಮಾಡಿ ತೋರಿಸಿದ್ದಾರೆ.ಜನಸಾಮಾನ್ಯರ ಹೃದಯದಲ್ಲಿ ದೇವರನ್ನು ಕಾಣುವ ಅವರು, ಸೇವೆಯ ಮೂಲಕ ದೇವರ ಸೇವೆಯನ್ನೂ ಮಾಡುತ್ತಿದ್ದಾರೆ ಎಂದು ಹೇಳಿದರು.

ಸಮಾವೇಶವನ್ನು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲದಾಪುರ ಉದ್ಘಾಟಿಸಿದರು. ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಿದ್ದರು.ವೀಡಿಯೊ ಬಿಡುಗಡೆಗೊಳಿಸಿ ಹೇಮಾವತಿ ವೀ.ಹೆಗ್ಗಡೆ ಮಾತನಾಡಿದರು.ಮದ್ಯವ್ಯಸನಿಗಳನ್ನು ವ್ಯಸನಮುಕ್ತರಾಗಿ ಮನ ಒಲಿಸಿದ ನವಜೀವನ ಸಮಿತಿ ಸದಸ್ಯರನ್ನು “ಜಾಗೃತಿ ಮಿತ್ರ” ಮತ್ತು “ಜಾಗೃತಿ ಅಣ್ಣ” ಪ್ರಶಸ್ತಿ ನೀಡಿ ಗೌರವಿಸಲಾಯಿತು.ಡಿ.ಹರ್ಷೇಂದ್ರ ಕುಮಾರ್ ಸ್ಮರಣಸಂಚಿಕೆ ಬಿಡುಗಡೆಗೊಳಿಸಿದರು.ಪಾನಮುಕ್ತರ ಪರವಾಗಿ ವಿಜಯನಗರ ಜಿಲ್ಲೆಯ ಕೂಡ್ಲಿಗಿ ಶಿಕ್ಷಕ ಸತ್ಯಮೂರ್ತಿ ಮತ್ತು ರಾಮದುರ್ಗದ ಸುವರ್ಣಬಸವರಾಜ್ ಅನಿಸಿಕೆ ವ್ಯಕ್ತಪಡಿಸಿದರು.ಬೆಂಗಳೂರು ಕ್ಷೇಮವನದ ಸಿ.ಇ.ಒ. ಶ್ರದ್ಧಾ ಅಮಿತ್ ಉಪಸ್ಥಿತರಿದ್ದರು.ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಶುಭಾಶಂಸನೆ ಮಾಡಿದರು.
ಅಖಿಲಕರ್ನಾಟಕ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ. ವಸಂತ ಸಾಲ್ಯಾನ್ ಮತ್ತು ಸಮಾಜ ಸೇವಕ ಮುಂಬೈನ ಆರ್.ಬಿ. ಹೆಬ್ಬಳ್ಳಿ ಅವರನ್ನು ಗೌರವಿಸಲಾಯಿತು.ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ ಉಪಸ್ಥಿತರಿದ್ದರು.ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಆಶಯ ನುಡಿಗಳ ಹೇಳಿ ಶುಭ ಹಾರೈಸಿದರು.ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಮೆರವಣಿಗೆಗೆ ಚಾಲನೆ ನೀಡಿ ಶುಭ ಹಾರೈಸಿದರು. ಜನಜಾಗೃತಿ ವೇದಿಕೆಯ ಕಾರ್ಯದರ್ಶಿ ವಿವೇಕ್ ವಿ. ಪಾಯಸ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.ಜನಜಾಗೃತಿ ವೇದಿಕೆಯ ರಾಜ್ಯ ಸಂಘಟನಾ ಅಧ್ಯಕ್ಷ ನಟರಾಜ್ ಬಾದಾಮಿ ಧನ್ಯವಾದವಿತ್ತರು.
ಯೋಜನಾಧಿಕಾರಿಗಳಾದ ಗಣೇಶ್ ಆಚಾರ್ಯ ಮತ್ತು ಭಾಸ್ಕರ್ ಎನ್. ಕಾರ್ಯಕ್ರಮ ನಿರ್ವಹಿಸಿದರು.












