ಪ್ರಯಾಗ್ರಾಜ್: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಇಂದು(ಜನವರಿ 29) ಕಾಲ್ತುಳಿತ ಸಂಭವಿಸಿದ್ದು, ಇದರಲ್ಲಿ ಬೆಳಗಾವಿ ಮೂಲದ ನಾಲ್ವರು ಸೇರಿ ಹಲವರು ಸಾವನ್ನಪ್ಪಿದ್ದು, ಇನ್ನು ಹಲವು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೌನಿ ಅಮಾವಾಸ್ಯೆ ದಿನವಾದ
ಇಂದು(ಬುಧವಾರ) ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಲಕ್ಷಾಂತರ ಜನರು ಪ್ರಯಾಗರಾಜ್ಗೆ ಬಂದಿದ್ದರು. ಮುಂಜಾನೆ 3 ಗಂಟೆಯ ಸುಮಾರಿಗೆ ಪವಿತ್ರ ಸ್ನಾನ ಮಾಡಲು ಯಾತ್ರಾರ್ಥಿಗಳು ಒಮ್ಮೆಲೆ ನುಗ್ಗಿದ್ದರಿಂದ ಕಾಲ್ತುಳಿತ ಸಂಭವಿಸಿದೆ.
ಕರ್ನಾಟಕದ ನಾಲ್ವರು ಸೇರಿ ಇಲ್ಲಿಯವರೆಗೆ 10ಕ್ಕೂ ಅಧಿಕ ಮಂದಿ ಮೃತಪಟ್ಟಿರುವುದಾಗಿ ವರದಿಗಳು ತಿಳಿಸಿವೆ.