ಸುಳ್ಯ:ಸುಳ್ಯ,ಪುತ್ತೂರು, ಬೆಳ್ತಂಗಡಿ, ಉಪ್ಪಿನಂಗಡಿ, ಕಡಬ ಹಾಗೂ ವಿಟ್ಲ ವಲಯಗಳನ್ನು ಒಳಗೊಂಡಿರುವ ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಜಿಲ್ಲಾ ಈಸ್ಟ್ ಸಮಿತಿಯ ಉಪಾಧ್ಯಕ್ಷರಾಗಿ ಮಹಮ್ಮದ್ ಕುಂಞಿ ಗೂನಡ್ಕ ಅಯ್ಕೆಯಾಗಿದ್ದರು. ಪುತ್ತೂರಿನ ರೋಟರಿ ಸಭಾಂಗಣದಲ್ಲಿ ಜರುಗಿದ ಸಭೆಯಲ್ಲಿ ಆಯ್ಕೆ ನಡೆಸಲಾಯಿತು.ಈ ಹಿಂದೆ ಅವರು ಕರ್ನಾಟಕ ಮುಸ್ಲಿಂ ಜಮಾಅತ್ ಸುಳ್ಯ ತಾಲೂಕು ಸಮಿತಿಯ ಅಧ್ಯಕ್ಷರಾಗಿ, ಸುಳ್ಯ ಎಸ್.ಎಂ.ಎ.ಅಧ್ಯಕ್ಷರಾಗಿ ವಿವಿಧ ಧಾರ್ಮಿಕ, ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.