ನವದೆಹಲಿ: ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಕೇಂದ್ರದ ಚುನಾವಣಾ ಆಯೋಗ ಪ್ರಕಟಿಸಿದೆ. ಮಹಾರಾಷ್ಟ್ರದಲ್ಲಿ ನವೆಂಬರ್ 20ರಂದು ಒಂದೇ ಹಂತದಲ್ಲಿ
ವಿಧಾನಸಭೆ ಚುನಾವಣೆ ನಡೆಯಲಿದ್ದು, ನವೆಂಬರ್ 23ರಂದು ಮತ ಎಣಿಕೆ ನಡೆದು, ಫಲಿತಾಂಶ ಹೊರಬೀಳಲಿದೆ.
ಜಾರ್ಖಂಡ್ನಲ್ಲಿ ನವೆಂಬರ್ 13 ಮತ್ತು 20ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ನವೆಂಬರ್ 23ಕ್ಕೆ ಫಲಿತಾಂಶ ಹೊರಬೀಳಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.





