ಮುಂಬಯಿ: ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟವು ಭಾರೀ ಮುನ್ನಡೆ ಕಾಯ್ದುಕೊಂಡಿದ್ದು 224 ಕ್ಷೇತ್ರಗಳಲ್ಲಿ ಜಯಭೇರಿ ಭಾರಿಸುವ ಹೊಸ್ತಿಲಲ್ಲಿದೆ. ಮಹಾ ವಿಕಾಸ ಅಘಾಡಿಯು 53 ಕ್ಷೇತ್ರಗಳಲ್ಲಷ್ಟೇ ಮುನ್ನಡೆ ಕಾಯ್ದುಕೊಳ್ಳುವಲ್ಲಿ ಶಕ್ತವಾಗಿದೆ. ಇತರೆ ಪಕ್ಷ ಹಾಗೂ
ಪಕ್ಷೇತರರು 11 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಜಾರ್ಖಂಡ್ನಲ್ಲಿ ಇಂಡಿಯಾ ಬಣ ಮುನ್ನಡೆ ಕಾಯ್ದುಕೊಂಡಿದೆ.
ಜಾರ್ಖಂಡ್ನ 81 ಕ್ಷೇತ್ರಗಳ ವಿಧಾನಸಭೆಗೆ ನಡೆದ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಕಾಂಗ್ರೆಸ್ ಹಾಗೂ ಜೆಎಂಎಂ ಮೈತ್ರಿಕೂಟದ ಇಂಡಿಯಾ ಬಣ 51 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.





