ಸುಳ್ಯ: ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾಗಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಆಯ್ಕೆಯಾಗಿದ್ದಾರೆ.
ಕರ್ನಾಟಕ ವಿಧಾನಸಭಾ ಅಧ್ಯಕ್ಷರಾದ ಯು.ಟಿ ಖಾದರ್ ಅವರ ನಿರ್ದೇಶನದ ಮೇರೆಗೆ ಸಮಿತಿ ರಚಿಸಲಾಗಿದ್ದು ಸಮಿತಿಯ ಅಧ್ಯಕ್ಷರಾಗಿ ರೂಪಕಲಾ ಎಂ ಇವರು ಕಾರ್ಯನಿರ್ವಹಿಸಲಿದ್ದಾರೆ. ಈ ಸಮಿತಿಯಲ್ಲಿ 15 ವಿಧಾನಸಭಾ ಸದಸ್ಯರು ಹಾಗೂ 5 ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
previous post