ಮಂಗಳೂರು:ರಾಜ್ಯ ಮಹಿಳಾ ಆಯೋಗವು ಅತ್ಯಂತ ಪಾರದರ್ಶಕವಾಗಿ ಕಾರ್ಯನಿರ್ವಹಿಸುತ್ತಿದ್ದು, ದೂರು ದಾಖಲಾದ ಕೆಲವೇ ದಿನದಲ್ಲಿ ಪರಿಹಾರ ಕಲ್ಪಿಸಲಾಗುತ್ತಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಪ್ರಮೀಳಾ ಆರ್ ನಾಯ್ಡು ಅವರು ತಿಳಿಸಿದರು. ಅವರು ಮಾ1ರಂದು ನಗರದ ಜಿಲ್ಲಾ ಪಂಚಾಯತ್ನ ವಿಡಿಯೋ ಸಂವಾದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ರಾಜ್ಯ ಮಹಿಳಾ ಆಯೋಗವು ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ
ಇತರೆ ಪ್ರಕರಣಗಳಲ್ಲಿ ಮಹಿಳೆಯರನ್ನು ರಕ್ಷಿಸಲು ಸಶಕ್ತವಾಗಿ ಕಾರ್ಯನಿರ್ವಹಿಸುತ್ತಿದ್ದು, ದೌರ್ಜನ್ಯ, ಕೌಟುಂಬಿಕ ದೌರ್ಜನ್ಯ, ಹಲ್ಲೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ದಾಖಲಾದ ದೂರುಗಳನ್ನು ಕೂಡಲೇ ಇತ್ಯರ್ಥ ಪಡಿಸಲು ಹಾಗೂ ನೊಂದ ಮಹಿಳೆಯರಿಗೆ ನ್ಯಾಯಕೊಡಿಸುವ ಕೆಲಸ ಮಾಡುತ್ತಿದೆ ಕೆಲವೊಂದು ಪ್ರಕರಣಗಳಲ್ಲಿ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿ ಕೊಂಡು ಪರಿಹಾರ ಕಲ್ಪಿಸಲಾಗುತ್ತಿದೆ ಎಂದರು.

ಕನಕ2020ರಿಂದ ಮಹಿಳಾ ಆಯೋಗವು ರಾಜ್ಯದಲ್ಲಿ 6,728 ದೂರುಗಳನ್ನು ಸ್ವೀಕರಿಸಿದೆ. ಇವುಗಳಲ್ಲಿ 4,120ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, ವಿವಿಧ ಹಂತಗಳಲ್ಲಿ 2,608 ಪ್ರಕರಣಗಳು ಇತ್ಯರ್ಥಕ್ಕೆ ಬಾಕಿಯಿವೆ. ದಕ್ಷಿಣ ಕನ್ನಡ ಜಿಲ್ಲೆಯ ಸಿಡಿಪಿಒ ಕಚೇರಿಗಳಲ್ಲಿ ಒಟ್ಟು 722 ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 520 ಪ್ರಕರಣಗಳನ್ನು ಸಂಧಾನದ ಮೂಲಕ ಪರಿಹರಿಸಲಾಗಿದ್ದರೆ, 170 ಪ್ರಕರಣಗಳು ನ್ಯಾಾಯಾಲಯದಲ್ಲಿವೆ ಎಂದವರು ಹೇಳಿದರು.
ಜಿಲ್ಲೆಯಲ್ಲಿ ಮಹಿಳೆಯರ ಸ್ಥಿತಿಗತಿ ಕುರಿತು ನೆನ್ನೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಕುಲಂಕುಶವಾಗಿ ಸಭೆ ನಡೆಸಲಾಗಿದೆ, ಕೌಟುಂಬಿಕ ದೌರ್ಜನ್ಯ ಪ್ರಕರಣಗಳು ಹಾಗೂ ವಿವಾಹೇತರ ಸಂಬಂಧಗಳ ಬಗ್ಗೆ ಹೆಚ್ಚಿನ ಪ್ರಕರಣಗಳು ಜಿಲೆಯಲ್ಲಿ ಕಂಡುಬಂದಿವೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಾಧಿಕಾರಿ ಡಾ. ಕುಮಾರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಪಾಪ ಭೋವಿ ಗೋಷ್ಠಿಯಲ್ಲಿದ್ದರು.