ಸುಳ್ಯ: ಸಂಪಾಜೆ ಗ್ರಾಮ ಪಂಚಾಯತ್ನಲ್ಲಿ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಕಾರ್ಯಕ್ರಮ ಪಂಚಾಯತ್ ಸಭಾಭವನದಲ್ಲಿ
ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷ ಜಿ. ಕೆ ಹಮೀದ್ ಗೂನಡ್ಕ ಅಧ್ಯಕ್ಷತೆ ವಹಿಸಿದ್ದರು.ಬೇಸಿಗೆ ಶಿಬಿರದಲ್ಲಿ ಭಾಗವಹಿಸಿದ ಮಕ್ಕಳು ತಮ್ಮ
ಅನಿಸಿಕೆಗಳನ್ನು ಹಂಚಿಕೊಂಡರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜಾ ಶಿಬಿರದ ಮಾಹಿತಿ ನೀಡಿದರು. ವೇದಿಕೆಯಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಲಿಸ್ಸಿ ಮೊನಾಲಿಸಾ ಸದಸ್ಯರಾದ ಜಗದೀಶ್ ರೈ ವಿಮಲಾ ಪ್ರಸಾದ್, ತರಬೇತುದಾರರಾದ ಓನೆಸಿಮಸ್ ರೆಬೆಲ್ಲೊ,, ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು ತರಬೇತಿಯಲ್ಲಿ ಭಾಗವಹಿಸಿದ ಎಲ್ಲಾ ಶಿಬಿರರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ಪ್ರೀತಮ್ ಹಾಗೂ ಹರ್ಷಿತ್ ಕಾರ್ಯಕ್ರಮ ನಿರೂಪಿಸಿದರು. ಸಂಪಾಜೆ ಕಲ್ಲುಗುಂಡಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಸೋಮಶೇಖರ್ ಕೊಯಿಂಗಾಜೆ ಎಲ್ಲರಿಗೂ ಮದ್ಯಾಹ್ನ ಊಟದ ವ್ಯವಸ್ಥೆ ಮಾಡಿದರು.