ಸುಳ್ಯ: ಗ್ರಾಮ ಪಂಚಾಯತ್ ಸಂಪಾಜೆ ದ. ಕ. ಹಾಗೂ ತೆಕ್ಕಿಲ್ ಸಮೂಹ ಶಿಕ್ಷಣ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ಮಕ್ಕಳ ಸಾಂಸ್ಕೃತಿಕ ಹಬ್ಬ 2022 ತೆಕ್ಕಿಲ್ ಶಿಕ್ಷಣ ಸಂಸ್ಥೆಯಲ್ಲಿ ನ 14ರಂದು
ನಡೆಯಲಿದೆ.ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ 7 ಪ್ರಾಥಮಿಕ ಶಾಲೆ ಹಾಗೂ 4 ಪ್ರೌಢಶಾಲೆಯ ಮಕ್ಕಳು ಸಾಂಸ್ಕೃತಿಕ ಹಬ್ಬದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲಾ ಶಾಲೆಗಳಿಗೆ ಮಾರ್ಗ ಸೂಚಿ ಕಳುಹಿಸಲಾಗಿದೆ. ಸ್ಪರ್ಧಾ ವಿಜೇತರಿಗೆ ಪ್ರಥಮ ಹಾಗೂ ದ್ವಿತೀಯ ಬಹುಮಾನ, ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಭಾಗವಹಿಸಿದ ಶಾಲೆಗಳಿಗೆ ಸಮಾಧಾನಕರ ಬಹುಮಾನ ನೀಡಲಾಗುವುದುಮದ್ಯಾಹ್ನ ಭೋಜನದ ವೆವಸ್ಥೆ ಇದೆ ಎಂದು ಎಂದು ಸಂಪಾಜೆ ಗ್ರಾ.ಪಂ. ಅಧ್ಯಕ್ಷ ಜಿ. ಕೆ ಹಮೀದ್ ಗೂನಡ್ಕ ತಿಳಿಸಿದ್ದಾರೆ.