ಸುಳ್ಯ:ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ಹೋಬಳಿ ಘಟಕ ಇದರ ಆಶ್ರಯದಲ್ಲಿ ಅಮೃತ ಮಹೋತ್ಸವ ಸಮಿತಿ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ಇದರ ಸಹಕಾರದೊಂದಿಗೆ ಯು.ಸು.ಗೌ ಸ್ಮರಣಾರ್ಥ ಸುಳ್ಯ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನ 2025 ನ.2 ರಂದು ಸುಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಸಾಹಿತ್ಯ ಸಮ್ಮೇಳನದಲ್ಲಿ
ಕವಿಗೋಷ್ಠಿ, ಚರ್ಚಾಗೋಷ್ಠಿ,ಹಾಗೂ ವಿವಿಧ ಸಾಂಸ್ಕೃತಿಕ ಕನ್ನಡ ಕಲರವ ಕಾರ್ಯಕ್ರಮಗಳು ನಡೆಯಿತು.ಸುಳ್ಯ ಸರಕಾರಿ ಜೂನಿಯರ್ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪಿ ಬಿ ಸುಧಾಕರ್ ರೈ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಲಿಂಗಪ್ಪ ಗೌಡ ಕೇರ್ಪಳ ಕನ್ನಡ ಧ್ವಜಾರೋಹಣ ನಡೆಸಿದರು.ಬಳಿಕ ನಡೆದ ಸಭಾ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪೌರ್ಣಮಿ ಕೆ ವಹಿಸಿದ್ದರು.ಹಿರಿಯ ಸಾಹಿತಿ ಪ್ರಭಾಕರ್ ಶಿಶಿಲಲಾ ಸಮ್ಮೇಳನವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ
ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಇದರ ವಿದ್ಯಾರ್ಥಿ ಆತ್ಮೀಯ ಕೆ, ಸುಳ್ಯ ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ, ಸುಳ್ಯ ಜೂನಿಯರ್ ಕಾಲೇಜು ಪ್ರಾಂಶುಪಾಲರಾದ ಮೋಹನ್ ಗೌಡ ಬೊಮ್ಮೆಟ್ಟಿ, ಸವಣೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪದ್ಮಾವತಿ ಯನ್. ಪಿ. ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ಪ್ರತಿನಿಧಿ ರಾಮಚಂದ್ರ ಪಲ್ಲತಡ್ಕ, ಶಾಲಾ ಉಪ ಪ್ರಾಂಶುಪಾಲರಾದ ಪ್ರಕಾಶ್ ಮೂಡಿತ್ತಾಯ, ಸುಳ್ಯ ಕ ಸಾ ಪ ಅಧ್ಯಕ್ಷರಾದ ಚಂದ್ರಶೇಖರ ಪೆರಾಲು, ಕೋಶಾಧಿಕಾರಿ ದಯಾನಂದ ಆಳ್ವಾ, ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ಹೋಬಳಿ ಘಟಕದ ಅಧ್ಯಕ್ಷೆ ಚಂದ್ರಾವತಿ ಬಡ್ಡಡ್ಕ, ಮೊದಲಾದವರು ಉಪಸ್ಥಿತರಿದ್ದರು.















