ಸುಳ್ಯ:ಮಳೆ ಹಾನಿ ಬಾಧಿತ ಪ್ರದೇಶಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ ನೀಡಿದರು. ಕೊಲ್ಲಮೊಗ್ರು ಗ್ರಾಮದ ಬೆಂಡೋಡಿ ರಸ್ತೆಯ ಸೇತುವೆಯು ಕೊಚ್ಚಿ ಹೋದ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಿಸಿ ಸ್ಥಳೀಯರೊಂದಿಗೆ ಮಾತುಕತೆ ನಡೆಸಿ ಮಾಹಿತಿ ಪಡೆದರು. ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿಯ ಪಲ್ಲೋಡಿ ರಸ್ತೆಯು ಮಳೆಯಿಂದ ಸಂಪರ್ಕ ಕಡಿತಗೊಂಡ ಸ್ಥಳವನ್ನು ಶಾಸಕಿ ವೀಕ್ಷಿಸಿದರು. ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಮುಳಿಯ ಕೇಶವ ಭಟ್, ವೆಂಕಟ್ ದಂಬೆಕೋಡಿ ಮತ್ತಿತರರು ಇದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post