ಸುಳ್ಯ:ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಪುತ್ತೂರು ಮತ್ತು ಕಡಬ ತಾಲೂಕುಗಳ ವ್ಯಾಪ್ತಿಯಲ್ಲಿರುವ ಮಳೆ ಮಾಪನ ಕೇಂದ್ರಗಳ ಪರಿಶೀಲನೆ,ದುರಸ್ತಿ, ಪುನರ್ಮಾಪನ ಹಾಗೂ ಹೊಸ ಸ್ವಯಂಚಾಲಿತ ಮಳೆ ಮಾಪನ ಕೇಂದ್ರಗಳ
ಸ್ಥಾಪನೆಗೆ ಆಗ್ರಹಿಸಿ ಕೃಷಿಕರ ಹಿತರಕ್ಷಣಾ ವೇದಿಕೆಯ ಸಂಚಾಲಕ ಕೃಷ್ಣ ಪ್ರಸಾದ್ ಮಡ್ತಿಲ ಕೃಷಿ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.ಈ ಮನವಿಗೆ ಸ್ಪಂದಿಸಿದ ಕೃಷಿ ಸಚಿವರು ಈ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಕೃಷಿ ಇಲಾಖೆಯ ಆಯುಕ್ತರಿಗೆ ನಿರ್ದೇಶನ ನೀಡಿದ್ದಾರೆ. ಮನವಿಗೆ ಸ್ಪಂದಿಸಿದ ಸರಕಾರ ಮಳೆ ಮಾಪನ ಕೇಂದ್ರಗಳ ದುರಸ್ತಿಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ಇದೆ ಎಂದು ಕೃಷಿಕರ ಹಿತರಕ್ಷಣಾ ವೇದಿಕೆ ಪ್ರಕಟಣೆಯಲ್ಲಿ ತಿಳಿಸಿದೆ.














