ಸುಬ್ರಹ್ಮಣ್ಯ: ಬಾರೀ ಮಳೆ ಮುಂದುವರಿದಿದ್ದು, ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ಬಳಿ ಹೆದ್ದಾರಿ ಜಲಾವೃತಗೊಂಡಿದ್ದು ಪದವಿ ವಿದ್ಯಾರ್ಥಿಗಳು ಅಪಾಯಕಾರಿ ಸ್ಥಿತಿಯಲ್ಲಿ ಉಕ್ಕಿ ಹರಿದ ಪ್ರವಾಹ ನೀರಿನಲ್ಲಿ ಸಂಚರಿಸಿ ಪರೀಕ್ಷೆಗೆ ಹಾಜರಾಗಬೇಕಾದ ಸ್ಥಿತಿ ಉಂಟಾಗಿದೆ. ಪದವಿ ವಿದ್ಯಾರ್ಥಿಗಳಿಗೆ

ರಜೆ ಘೋಷಣೆ ಮಾಡಿರಲಿಲ್ಲ. ಮಾತ್ರವಲ್ಲದೆ ಪದವಿ ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪರೀಕ್ಷೆ ನಡೆಯುತ್ತಿದೆ. ಪಂಜ ಭಾಗದಿಂದ ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿಗೆ ಪರೀಕ್ಷೆ ಹಾಜರಾಗಲು ಬರುವ ವಿದ್ಯಾರ್ಥಿಗಳು ಜಲಾವೃತಗೊಂಡ ರಸ್ತೆಯಲ್ಲೇ ಸಂಚರಿಸಿ ಪರೀಕ್ಷಾ ಕೇಂದ್ರಗಳತ್ತ ಬರುತ್ತಿರುವುದು ಕಂಡು ಬಂದಿದೆ. ಬೆಳಗ್ಗೆ ಹಾಗೂ ಮಧ್ಯಾಹ್ನ ಪರೀಕ್ಷೆಗಳು ನಡೆಯಿತ್ತಿವೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುತಿದೆ.