ಸುಳ್ಯ:ಮಲೆನಾಡು ಗಿಡ್ಡ ಸಂರಕ್ಷಣೆ ಮತ್ತು ಸಂವರ್ಧನಾ ಅಭಿಯಾನ ಮತ್ತು ಕೆವಿಜಿ ಸಮೂಹ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ಮಲೆನಾಡು ಗಿಡ್ಡ ಸಂರಕ್ಷಣೆ ಮತ್ತು ಸಂವರ್ಧನಾ ಅಭಿಯಾನದ ವೆಬ್ಸೈಟ್ ಅನಾವರಣ, ಗೋಪೂಜೆ ಮತ್ತು ಗೋವುಗಳ ಸಂರಕ್ಷಣಾ ಕಾರ್ಯಕ್ರಮ ಮೇ. 25ರಂದು ಪೂರ್ವಾಹ್ನ 9ರಿಂದ ಸುಳ್ಯ ಕೆವಿಜಿ ಆಯುರ್ವೇದ ಫಾರ್ಮಾ ಮತ್ತು ರಿಸರ್ಚ್ ಸೆಂಟರ್ನಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಉದ್ಘಾಟಿಸುವರು. ಮಲೆನಾಡು ಗಿಡ್ಡ ಸಂರಕ್ಷಣೆ ಮತ್ತು ಸಂವರ್ಧನಾ ಅಭಿಯಾನ ಇದರ ಅಧ್ಯಕ್ಷರಾದ ಸದಾಶಿವ ಭಟ್ ಮರಿಕೆ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಎನ್ಡಿಆರ್ಐ(ನ್ಯಾಷನಲ್ ಡೈರಿ ಸಂಶೋಧನಾ ಸಂಸ್ಥೆ) ಬೆಂಗಳೂರು ಇದರ ಫಾರ್ಮರ್ ಹೆಡ್ ಡಾ.ಕೆ.ಪಿ.ರಮೇಶ್,

ಮಾಜಿ ಸಚಿವರಾದ ಎಸ್. ಅಂಗಾರ, ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ನ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರಾದ ನಿತ್ಯಾನಂದ ಮುಂಡೋಡಿ ಪುತ್ತೂರು ಡಿವೈಎಸ್ಪಿ ಅರುಣ್ ನಾಗೇ ಗೌಡ, ಸುಳ್ಯ ಎಸಿಎಫ್ ಪ್ರವೀಣ್ ಕುಮಾರ್, ಮಲೆನಾಡು ಗಿಡ್ಡ ಸಂರಕ್ಷಣೆ ಮತ್ತು ಸಂವರ್ಧನಾ ಅಭಿಯಾನದ ಸಂಘಟಕರಾದ ಅಕ್ಷಯ್ ಆಳ್ವ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಗೌವ್ಯೋತ್ಪನ್ನಗಳ ಪ್ರದರ್ಶನ ಮತ್ತು ಮಾರಾಟದ ವ್ಯವಸ್ಥೆ ಇರುತ್ತದೆ ಎಂದು ಕಾರ್ಯಕ್ರಮದ ಸಂಘಟಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.