ಸುಳ್ಯ: ಸುಳ್ಯ ನಗರ ಸೇರಿದಂತೆ ತಾಲೂಕಿನ ವಿವಿಧ ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ. ಮಧ್ಯಾಹ್ನದ ಬಳಿಕ ಹಾಗೂ ಸಂಜೆಯ ವೇಳೆಗೆ ಮಳೆ ಸುರಿದಿದೆ. ಸಂಜೆಯಿಂದ ಆರಂಭಗೊಂಡು ರಾತ್ರಿಯೂ ಹನಿ ಮಳೆ
ಮುಂದುವರಿದಿದೆ.ಈ ಮಧ್ಯೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ವ್ಯಾಪ್ತಿಯ ಕೆಲವು ಪ್ರದೇಶಗಳಲ್ಲಿ ಮುಂದಿನ ಎರಡು ದಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೆಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ. ಗಾಳಿಯು 30ರಿಂದ 40 ಕಿ.ಮೀ ವೇಗದಲ್ಲಿ ಬೀಸಲಿದೆ.