ಅಡ್ಕಾರು:ಮಲ್ಲಿಗೆ ಕೃಷಿ ಆರ್ಥಿಕ ಸ್ವಾವಲಂಬನೆಗೆ ಸಹಕಾರಿಯಾಗಲಿದ್ದು,
ಸಾವಯವವಾಗಿ ಮಲ್ಲಿಗೆ ಕೃಷಿ ಬೆಳೆಸಿ, ಹೆಚ್ಚಿನ ಮಹಿಳೆಯರು ಈ ಕೃಷಿಯಲ್ಲಿ ತೊಡಗಿಸಿಕೊಳ್ಳಿ ಎಂದು ತೋಟಗಾರಿಕಾ ವಿಜ್ಞಾನಿ
ಡಾ. ರಶ್ಮಿ ಹೇಳಿದರು.ಅವರು ಜು.13 ರಂದು ಅಡ್ಕಾರಿನ ಸಂಜೀವಿನಿ ಒಕ್ಕೂಟದ ಸಭಾಂಗಣದಲ್ಲಿ
ಬ್ಯಾಂಕ್ ಆಫ್ ಬರೋಡಾ, ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ವಿಜಯ ಗ್ರಾಮಾಭಿವೃದ್ಧಿ ಸಮಿತಿ ಜಾಲ್ಸೂರು ಆಶ್ರಯದಲ್ಲಿ ಶ್ರೀ ಸುಬ್ರಹ್ಮಣ್ಯ ಸಂಜೀವಿನಿ ಒಕ್ಕೂಟ ಇವರ ಸಹಯೋಗದಲ್ಲಿ ನಡೆದ ಮಲ್ಲಿಗೆ ಕೃಷಿ ತರಬೇತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು.ತರಬೇತಿ ಕಾರ್ಯಕ್ರಮವನ್ನು ಜಾಲ್ಸೂರು ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೈಲಜಾ ಉದ್ಘಾಟಿಸಿದರು.ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜ್ಯೋತಿರಾಜ್ ಅಧ್ಯಕ್ಷತೆ ವಹಿಸಿದ್ದರು.ಶ್ರೀ ಸುಬ್ರಹ್ಮಣ್ಯ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಕುಸುಮ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜಾಲ್ಸೂರು
ವಿಜಯ ಗ್ರಾಮಾಭಿವೃದ್ಧಿ ಸಮಿತಿಯ ಅಧ್ಯಕ್ಷ ಯಶ್ವಿತ್ ಕಾಳಮ್ಮನೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಸೌಮ್ಯ ಕದಿಕಡ್ಕ ಪ್ರಾರ್ಥಿಸಿ, ನಿವೃತ್ತ ಶಿಕ್ಷಕ ಲೋಕನಾಥ ಕಡಪಳ ವಂದಿಸಿದರು.ಕಾರ್ಯಕ್ರಮ ಸಂಯೋಜಕಿ ತಿರುಮಲೇಶ್ವರಿ ಅರ್ಭಡ್ಕ ಕಾರ್ಯಕ್ರಮ ನಿರೂಪಿಸಿದರು.
ಸುಬ್ರಹ್ಮಣ್ಯ ಸಂಜೀವಿನಿ ಒಕ್ಕೂಟದ ಸದಸ್ಯರು, ವಿಜಯ ಗ್ರಾಮೀಣಾಭಿವೃದ್ಧಿ ಸಮಿತಿಯ ಸದಸ್ಯರು ಸೇರಿದಂತೆ 90 ಮಂದಿ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಇದೇ ಸಂದರ್ಭ ಸಮುದಾಯ ಆರೋಗ್ಯಾಧಿಕಾರಿ ರಚನಾ ಹಾಗೂ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಜಲಜಾಕ್ಷಿಯವರು ಆರೋಗ್ಯ ಮಾಹಿತಿ, ವಿಜಯ ಗ್ರಾಮಾಭಿವೃದ್ಧಿ ಸಮಿತಿಯ ಸದಸ್ಯೆ ರೇವತಿ ಕಾಳಮ್ಮನೆಯವರಿಂದ ಕರಕುಶಲ ತರಬೇತಿ ನಡೆಯಿತು.ತರಬೇತಿ ಪಡೆದುಕೊಂಡ ಎಲ್ಲರಿಗೂ ಪ್ರತಿಷ್ಠಾನದ ವತಿಯಿಂದ ಮಲ್ಲಿಗೆ ಗಿಡ ವಿತರಿಸಲಾಯಿತು.






