ಸುಳ್ಯ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಪ್ರಜಾಪ್ರಭುತ್ವದ ಮಹತ್ವ ಮತ್ತು ಸಂದೇಶ ಸಾರಿ ಬೃಹತ್ ಮಾನವ ಸರಪಳಿ ನಡೆಯಿತು.ಕಾರ್ಯಕ್ರಮದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಲ್ಕಿ ತಾಲೂಕಿನ ಹೆಜಮಾಡಿ ಟೋಲ್ಗೇಟ್ನಿಂದ ಸುಳ್ಯ ತಾಲೂಕಿನ ಸಂಪಾಜೆಗೇಟ್ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ 130 ಕಿ.ಮೀ ದೂರಕ್ಕೆ ಲಕ್ಷಕ್ಕೂ ಮಿಕ್ಕಿ ಜನ ಭಾಗವಹಿಸಿ ಬೃಹತ್ ಮಾನವ ಸರಪಳಿ ನಿರ್ಮಿಸಲಾಯಿತು.ಸುಳ್ಯ ತಾಲೂಕಿನಲ್ಲಿ ಕನಕಮಜಲಿನಿಂದ
ಸಂಪಾಜೆ ತನಕ ಮಾನವ ಸರಪಳಿ ನಡೆಯಿತು. ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿ ಪ್ರಜಾಪ್ರಭುತ್ವದ ಸಂದೇಶ ನೀಡಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ, ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ, ಉಪಾಧ್ಯಕ್ಷ ಬುದ್ಧ ನಾಯ್ಕ್, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ತಹಶೀಲ್ದಾರ್ ಎಂ.ಮಂಜುನಾಥ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ, ಗ್ಯಾರಂಟಿ
ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ ಪ್ರಮುಖರಾದ ಪಿ.ಸಿ.ಜಯರಾಮ, ವೆಂಕಟ್ ದಂಬೆಕೋಡಿ, ಪಿ.ಎಸ್.ಗಂಗಾಧರ, ಎಂ.ವೆಂಕಪ್ಪ ಗೌಡ, ನಗರ ಪಂಚಾಯತ್ ಸದಸ್ಯರು, ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು,
ಭಾಗವಹಿಸಿದ್ದರು. ಸುಳ್ಯ ತಾಲೂಕಿನಲ್ಲಿ ಕನಕಮಜಲಿನಿಂದ ಸಂಪಾಜೆ ತನಕ ಸಾವಿರಾರು ಮಂದಿ ಭಾಗವಹಿಸಿ ಮಾನವ ಸರಪಳಿ ನಿರ್ಮಿಸಿದರು
ಜಿಲ್ಲೆಯಲ್ಲಿ ಹೆದ್ದಾರಿ ಉದ್ದಕ್ಕೂ ರಚನೆಗೊಂಡ ಮಾನವ ಸರಪಳಿಯಲ್ಲಿ ಸರ್ಕಾರೇತರ ಸಂಸ್ಥೆಗಳು, ಸಾರ್ವಜನಿಕ ವಲಯ
ಉದ್ಯಮಗಳು, ಖಾಸಗಿ ವಲಯ, ಸಂಘ ಸಂಸ್ಥೆಗಳು, ಹಾದು ಹೋಗುವ ಗ್ರಾಮ ಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆಗಳು, ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಸಾರ್ವಜನಿಕರು, ಸ್ವಸಹಾಯ ಸಂಘಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ಎಲ್ಲಾ ಇಲಾಖೆಗಳ ಅಧಿಕಾರಿ ಸಿಬ್ಬಂದಿಗಳು ಭಾಗವಹಿಸಿದ್ದರು.
ಕರ್ನಾಟಕ ರಾಜ್ಯಾದ್ಯಂತ ಬೀದರ್ ಜಿಲ್ಲೆಯಿಂದ ಚಾಮರಾಜನಗರವರೆಗೆ ಐತಿಹಾಸಿಕ ಮಾನವ ಸರಪಳಿ ನಡೆಯಿತು.