ಸುಳ್ಯ: ರಾಷ್ಟ್ರ ರಕ್ಷಣೆಗೆ ಸೌಹಾರ್ದತೆಯ ಸಂಕಲ್ಪದೊಂದಿಗೆ ಜ.26ರಂದು ಬೆಳ್ಳಾರೆಯಲ್ಲಿ ಎಸ್ಕೆಎಸ್ಎಸ್ಎಫ್ ವತಿಯಿಂದ ಮಾನವ ಸರಪಳಿ ನಡೆಯಲಿದೆ ಎಂದು ಎಸ್ಕೆಎಸ್ಎಸ್ಎಫ್ ಜಿಲ್ಲಾ ಉಪಾಧ್ಯಕ್ಷ ಜಮಾಲುದ್ದೀನ್ ಕೆ.ಎಸ್.ತಿಳಿಸಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಎಸ್ಕೆಎಸ್ಎಸ್ಎಫ್ ದ.ಕ.ಈಸ್ಟ್ ಜಿಲ್ಲಾ ಸಮಿತಿ ವತಿಯಿಂದ ಬೃಹತ್ ಮಾನವ ಸರಪಳಿ
ನಡೆಯಲಿದೆ ಎಂದು ತಿಳಿಸಿದರು. ಸಮಸ್ತ ಶತಮಾನೋತ್ಸವದ ಉದ್ಘಾಟನಾ ಸಮ್ಮೇಳನ ಜ.28ರಂದು ಬೆಂಗಳೂರು ಅರಮನೆ ನಗರದ ಶಂಸುಲ್ ಉಲಮಾ ನಗರದಲ್ಲಿ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಝಕಾರಿಯಾ ಜುಮಾ ಮಸೀದಿಯ ಅಧ್ಯಕ್ಷ ಯು.ಎಚ್.ಅಬೂಬಕ್ಕರ್ ಹಾಜಿ ಮಂಗಳ, ಉರೂಸ್ ಸ್ವಾಗತ ಸಮಿತಿ ಅಧ್ಯಕ್ಷ ಅಬ್ದುಲ್ ಖಾದರ್ ಹಾಜಿ ಬಾಯಂಬಾಡಿ, ಕಾರ್ಯದರ್ಶಿ ಯು.ಪಿ.ಬಶೀರ್, ಜಮಾ ಅತ್ ಕಾರ್ಯದರ್ಶಿ ಬಶೀರ್ ಕಲ್ಲಪಣೆ, ಉರೂಸ್ ಸಮಿತಿ ಉಪಾಧ್ಯಕ್ಷ ಜಮಾಲುದ್ದೀನ್ ಕೆ.ಎಸ್, ಜೊತೆ ಕಾರ್ಯದರ್ಶಿ ಬಶೀರ್ ಕೆ.ಎ., ಹಿರಿಯರಾದ ಹಂಸ ಮುಸ್ಲಿಯಾರ್ ಉಪಸ್ಥಿತರಿದ್ದರು.









