ಮಂಗಳೂರು:ಸಂಪಾಜೆ ಗ್ರಾಮಕ್ಕೆ ಅಭಿವೃದ್ಧಿಗೆ ವಿಶೇಷ ಅನುದಾನ ಒದಗಿಸಬೇಕು ಎಂದು ಸಂಪಾಜೆ ಗ್ರಾಮದ ಪ್ರಮುಖರ ನಿಯೋಗ ಸಚಿವ ಝಮಿರ್ ಅಹಮದ್ ಖಾನ್ ಅವರಿಗೆ ಮನವಿ ಸಲ್ಲಿಸಲಾಯಿತು. ಮಂಗಳೂರಿನಲ್ಲಿ ಕೆಪಿಸಿಸಿ ವಕ್ತಾರ ರಾದ ಟಿ. ಎಂ. ಶಾಹಿದ್ ತೆಕ್ಕಿಲ್ ನೇತೃತ್ವದಲ್ಲಿ
ಝಮಿರ್ ಅಹಮದ್ ಖಾನ್ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮತಿ ಶಕ್ತಿವೇಲು, ಉಪಾಧ್ಯಕ್ಷ ಹನೀಫ್ ಎಸ್. ಕೆ. ಮಾಜಿ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ, ಜಗದೀಶ್ ರೈ, ಸುಂದರಿ ಮುಂಡಡ್ಕ, ಹನೀಫ್ ಉಪಸ್ಥಿತರಿದ್ದರು. ಗ್ರಾಮದ ವಿವಿಧ ಕಾಮಗಾರಿಗಳಿಗೆ ವಿಶೇಷವಅನುದಾನ ನೀಡಬೇಕು ಎಂದು ವಿನಂತಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ಉಪಸ್ಥಿತರಿದ್ದರು