ಮಂಡೆಕೋಲು:ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನೇತೃತ್ವದಲ್ಲಿ ಮಂಡೆಕೋಲು ಗ್ರಾಮ ಗೌಡ ಸಮಿತಿ ಇವರ ಸಹಕಾರದಲ್ಲಿ ಅರೆಭಾಷೆ ಗಡಿನಾಡ ಉತ್ಸವವು ಡಿಸೆಂಬರ್ 1ರಂದು ಮಂಡೆಕೋಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ‘ಅಮೃತ ಸಭಾಭವನದಲ್ಲಿ’ ಆರಂಭಗೊಂಡಿದೆ.ಅರೆಭಾಷೆ ಅಕಾಡೆಮಿ ವತಿಯಿಂದ ನಡೆಯುತ್ತಿರುವ ಮೂರನೇ ಗಡಿನಾಡ ಉತ್ಸವವಾಗಿದ್ದು. ಕಾರ್ಯಕ್ರಮದ
ಆರಂಭದಲ್ಲಿ ಆಕರ್ಷಕ ಮೆರವಣಿಗೆ ನಡೆಯಿತು. ‘ಫಾರೆಸ್ಟ್ ಬಂಗಲೆ’ ಬಳಿಯಿಂದ ಆರಂಭಗೊಂಡ ಮೆರವಣಿಗೆ ಪ್ರಗತಿಪರ ಕೃಷಿಕ ಹಾಗೂ ಸಾಮಾಜಿಕ ಧುರೀಣ ಕುಶಾಲಪ್ಪ ಗೌಡ ಕುಕ್ಕೇಟಿ ಚಾಲನೆ ನೀಡಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.ಚೆಂಡೆ ವಾದ್ಯ ಮೇಳಗಳು, ಕುಣಿತ ಭಜನೆಯೊಂದಿಗೆ ಆಕರ್ಷಕ ಮೆರವಣಿಗೆ ಸಾಗಿ ಬಂತು. ಉದ್ಘಾಟನೆಯ ಬಳಿಕ‘ಅರೆಭಾಷೆ ಸಂಸ್ಕೃತಿನ ಉಳ್ಸಿ, ಸಾಹಿತ್ಯನ ಬೆಳ್ಸುವ ಕಾರ್ಯ’ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.
12ಗಂಟೆಯಿಂದ ಅಕಾಡೆಮಿ ಪ್ರಕಟಿಸಿದ ಪುಸ್ತಕಗಳ ಕುರಿತು ಅವಲೋಕನ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 12.30ರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.ಅಪರಾಹ್ನ 3 ರಿಂದ ಸಮಾರೋಪ ಸಮಾರಂಭ ನಡೆಯಲಿದೆ.