ಮಂಡೆಕೋಲು:ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಅರೆಭಾಷಿಕರು ಇರುವ ಗಡಿಪ್ರದೇಶಗಳಲ್ಲಿ ಅರೆಭಾಷೆಯ ಉಳಿವಿಗಾಗಿ ಮತ್ತು ಅವರ ಬಾಂಧವ್ಯವನ್ನು ವೃದ್ಧಿಸಿ ಅರೆಭಾಷೆ ಬೆಳೆಸುವ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಅರೆಭಾಷೆ ಗಡಿನಾಡ ಉತ್ಸವಗಳನ್ನು ಹಮ್ಮಿಕೊಳ್ಳಲಾಗುತಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಹೇಳಿದ್ದಾರೆ.ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನೇತೃತ್ವದಲ್ಲಿ ಮಂಡೆಕೋಲು ಗ್ರಾಮ ಗೌಡ ಸಮಿತಿ ಇವರ ಸಹಕಾರದಲ್ಲಿ ಡಿಸೆಂಬರ್ 1ರಂದು ಮಂಡೆಕೋಲಿನ
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ‘ಅಮೃತ ಸಭಾಭವನದಲ್ಲಿ’ ಹಮ್ಮಿಕೊಂಡ ಅರೆಭಾಷೆ ಗಡಿನಾಡ ಉತ್ಸವದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗೌಡರ ಯುವ ಸೇವಾ ಸಂಘದ ಪೂರ್ವಾಧ್ಯಕ್ಷ ಜಾಕೆ ಸದಾನಂದ ಗೌಡ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಂಡೆಕೋಲು ಗ್ರಾಮ ಪಂಚಾಯತ್ ಅಧ್ಯಕ್ಷ ಕುಶಲ ಉದ್ದಂತಡ್ಕ, ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾಮಕೃಷ್ಣ ರೈ, ಮಂಡೆಕೋಲು ಯಾದವ ಚಾರಿಟೇಬರ್ ಟ್ರಸ್ಟಿನ ಅಧ್ಯಕ್ಷ ರಾಮಚಂದ್ರ ಮಾಸ್ಟರ್ ಕೇನಾಜೆ, ತಾಲೂಕು
ಗೌಡ ಮಹಿಳಾ ಘಟಕದ ಅಧ್ಯಕ್ಷೆ ವಿನುತಾ ಪಾತಿಕಲ್ಲು, ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉದಯ ಕುಮಾರ್ ಜಿ. ಮಂಡೆಕೋಲು ಗ್ರಾಮ ಗೌಡ ಸಮಿತಿಯ ಉಸ್ತುವಾರಿ ನಿರ್ದೇಶಕರಾದ ಎಂ.ಎಚ್., ಸುರೇಶ್, ಶಿವಪ್ರಸಾದ್ ಉಗ್ರಾಣಿಮನೆ, ಕುಶಾಲಪ್ಪ ಗೌಡ ಕುಕ್ಕೇಟಿ, ಅರೆಭಾಷೆ ಅಕಾಡೆಮಿ ಸದಸ್ಯರಾದ ಡಾ.ಎನ್.ಎ.ಜ್ಞಾನೇಶ್, ಚಂದ್ರಶೇಖರ ಪೇರಾಲು, ಲೋಕೇಶ್ ಊರುಬೈಲು, ಪಿ.ಎಸ್.ಕಾರ್ಯಪ್ಪ ಅಕಾಡೆಮಿಯ ರಿಜಿಸ್ಟ್ರಾರ್ ಚಿನ್ನಸ್ವಾಮಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉದ್ಘಾಟನಾ ಸಮಾರಂಭಕ್ಕಿಂತ ಮುನ್ನ ಆಕರ್ಷಕ ಮೆರವಣಿಗೆ ನಡೆಯಿತು.ಕುಶಾಲಪ್ಪ ಗೌಡ ಕುಕ್ಕೇಟಿ ಮೆರವಣಿಗೆಗೆ ಚಾಲನೆ ನೀಡಿದರು. ಗ್ರಾಮದ ಹಾಗೂ ಸುಳ್ಯ ತಾಲೂಕಿನ ವಿವಿಧ ಭಾಗಗಳಿಂದ ನೂರಾರು ಮಂದಿ ಭಾಗವಹಿಸಿದ್ದಾರೆ.
.