ಮಂಡೆಕೋಲು:ಮಂಡೆಕೋಲು ಪ್ರಾಥಮಿಕ ಸಹಕಾರ ಸಂಘದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಎಲ್ಲ ಅಭ್ಯರ್ಥಿಗಳು ಜಯಗಳಿಸಿದ ಹಿನ್ನಲೆಯಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ಪಟಾಕಿ ಸಿಡಿಸಿ ಸಂಭ್ರಮಾಚರಣೆ ಆಚರಿಸಲಾಯಿತಲ್ಲದೆ, ವಿಜೇತ
ಅಭ್ಯರ್ಥಿಗಳಿಗೆ ಹಾರ ಹಾಕಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನಯಕುಮಾರ್ ಕಂದಡ್ಕ, ಸುಭೋದ್ ಶೆಟ್ಟಿ ಮೇನಾಲ, ಶಿವಪ್ರಸಾದ್ ಉಗ್ರಾಣಿಮನೆ, ಜಯರಾಜ ಕುಕ್ಕೆಟ್ಟಿ, ವಿಜೇತರ ಪರವಾಗಿ ಸುರೇಶ್ ಕಣೆಮರಡ್ಕ ಮಾತನಾಡಿದರು.ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಇದ್ದರು.