ಸುಳ್ಯ: ಇತಿಹಾಸ ಪ್ರಸಿದ್ಧ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಆರಂಭಗೊಂಡಿತು. ಬ್ರಹ್ಮಕಲಶೋತ್ಸವದ ಆರಂಭದ ವಿಧಿವಿಧಾನಗಳು ಶುಕ್ರವಾರ ನಡೆಯಿತು.ಸಂಜೆ ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಕ್ಷೇತ್ರಕ್ಕೆ ಬರಮಾಡಿಕೊಳ್ಳಲಾಯಿತು. ಬಳಿಕ ಮುಂದಿನ ಸರ್ವ ಕಾರ್ಯಗಳಿಗೆ ಯಾವುದೇ ವಿಘ್ನಗಳು ಬಾಧಿಸದಂತೆ ಕಾರ್ಯಕ್ರಮದ
ಯಶಸ್ಸಿಗಾಗಿ ದೇವತಾ ಪ್ರಾರ್ಥನೆ ಮಾಡಲಾಯಿತು. ಬಳಿಕ ತಂತ್ರಿಗಳ ನೇತ ಆಚಾರ್ಯವರಣ, ಪುಣ್ಯಾಹವಾಚನ, ಪ್ರಾಸಾದ ಶುದ್ಧಿ, ಅಂಕುರಾರೋಪಣ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಬಲಿ, ವಾಸ್ತು ಪುಣ್ಯಾಹಾಂತ ಕಾರ್ಯಕ್ರಮಗಳು ನಡೆದವು. ಬಳಿಕ ಅನ್ನಸಂತರ್ಪಣೆ ನಡೆಯಿತು.
ಈ ವೇಳೆ ದೇಗುಲದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೇಶವಮೂರ್ತಿ ಹೆಬ್ಬಾರ್, ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಪುಂಡರೀಕ ಹೆಬ್ಬಾರ್, ಅಧ್ಯಕ್ಷ ಸದಾನಂದ ಮಾವಜಿ, ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಮಾಸ್ತರ್, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಶಿವಪ್ರಸಾದ್ ಉಗ್ರಾಣಿಮನೆ, ಪ್ರಧಾನ ಕಾರ್ಯದರ್ಶಿ ಸುರೇಶ್ ಕಣೆಮರಡ್ಕ, ವೈದಿಕ ಸಮಿತಿಯ ಸಂಚಾಲಕ ಎ. ಕೆ ಮಣಿಯಾಣಿ, ಮಾತೃ ಸಮಿತಿಯ ಸಂಚಾಲಕಿ ವಿನುತಾ ಪಾತಿಕಲ್ಲು, ಕಣೆಮರಡ್ಕ ವಿಷ್ಣುಮೂರ್ತಿ ದೈವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಪೂರ್ಣಚಂದ್ರ ಕಣೆಮರಡ್ಕ ಹಾಗೂ ವಿವಿಧ ಉಪಸಮಿತಿಯ ಪ್ರಮುಖರು ಹಾಗೂ ಊರವರು ಹಾಜರಿದ್ದರು.