ಸುಳ್ಯ: ಧರ್ಮವನ್ನು ಪ್ರತಿನಿಧಿಸಿಕೊಂಡು ಮುನ್ನಡೆಯುವ ಧಾರ್ಮಿಕ ಶ್ರದ್ಧಾ ಕೇಂದ್ರಗಳು ಸಂಸ್ಕಾರ ಹಾಗೂ ಸನ್ನಡತೆಯನ್ನು ಕಲಿಸಿಕೊಡುವ ಪಾಠಶಾಲೆಗಳಂತಿರಬೇಕು ಎಂದು ಎಡನೀರು ಜಗದ್ಗುರು ಶಂಕರಾಚಾರ್ಯ ಪೀಠದ ಜಗದ್ಗುರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹೇಳಿದರು.ಅವರು ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಅಷ್ಟಬಂಧ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಆಯೋಜಿಸಲಾದ ನಾಲ್ಕನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು
ದೀಪ ಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿ ಮಾತನಾಡಿದರು. ಮಕ್ಕಳು ಧಾರ್ಮಿಕ ಶ್ರದ್ಧಾ ಕೇಂದ್ರಗಳಿಗೆ ಬರುವಂತಾಗಬೇಕು. ಧರ್ಮದ ಅರಿವು, ಸಂಸ್ಕೃತಿಯ ಅರಿವು ಮೂಡಿಸುವಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರಗಳು ಶ್ರಮಿಸುವ ಕಾರಣ ಮಕ್ಕಳನ್ನು ಶ್ರದ್ಧಾ ಕೇಂದ್ರಗಳಿಗೆ ಕಳುಹಿಸಿ ಸಂಸ್ಕಾರ ಮೈಗೂಡಿಸಿಕೊಳ್ಳಲು ಕಾರಣೀಭೂತರಾಗಬೇಕೆಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಧಾರ್ಮಿಕ ಉಪನ್ಯಾಸ ನೀಡಿ ಮಾತನಾಡಿದ ವೇದಮೂರ್ತಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿ ‘ಕರ್ತವ್ಯವನ್ನೇ ದೇವರೆಂದು ಬಗೆದು ಜೀವನದಲ್ಲಿ ತೊಡಗಿಕೊಂಡು ಮುನ್ನಡೆದರೆ ಜೀವನದಲ್ಲಿ ಯಶಸ್ಸು ಸಾಧ್ಯ ಎಂದರು.
ಮಾಜಿ ಸಚಿವ ಎಸ್.ಅಂಗಾರ ದೀಪ ಪ್ರಜ್ವಲನ ಮಾಡಿದರು, ಕ್ಷೇತ್ರದ ತಂತ್ರಿ ಬ್ರಹ್ಮಶ್ರಿ ವೇದಮೂರ್ತಿ ಕುಂಟಾರು ವಾಸುದೇವ ತಂತ್ರಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸೇವಾ ಪ್ರಮುಖ್ ನ.ಸೀತಾರಾಮ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹರೀಶ್ ಕಂಜಿಪಿಲಿ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಅಜ್ಜಾವರ ಮಹಿಷಮರ್ಧಿನಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಭಾಸ್ಕರ ರಾವ್ ಬಯಂಬು, ನಿವೃತ್ತ ಯೋಧರಾದ ದೇರಣ್ಣ ಗೌಡ ಅಡ್ಡಂತ್ತಡ್ಕ, ಜಿಲ್ಲಾ ಧಾರ್ಮಿಕ ಪರಿಷತ್ನ ಮಾಜಿ ಸದಸ್ಯ ಮುರಳೀಕೃಷ್ಣ ಹಸಂತಡ್ಕ, ಕರ್ಲಪ್ಪಾಡಿ ಶ್ರೀ ಶಾಸ್ತಾವೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಜೇಶ್ ಮೇನಾಲ ಅತಿಥಿಗಳಾಗಿ ಭಾಗವಹಿಸಿದ್ದರು.
ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶಿವಪ್ರಸಾದ್ ಉಗ್ರಾಣಿಮನೆ ಅಧ್ಯಕ್ಷತೆ ವಹಿಸಿದ್ದರು.ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಮೂರ್ತಿ ಹೆಬ್ಬಾರ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸದಾನಂದ ಮಾವಜಿ, ಪ್ರಧಾನ ಕಾರ್ಯದರ್ಶಿ ಸುರೇಶ್ ಕಣೆಮರಡ್ಕ, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಮಾಸ್ತರ್ ವೇದಿಕೆಯಲ್ಲಿ ಇದ್ದರು.
ಬ್ರಹ್ಮಕಶೋತ್ಸವ ಸಮಿತಿ ಕಾರ್ಯದರ್ಶಿ ಜಯರಾಜ್ ಕುಕ್ಕೆಟ್ಟಿ ಸ್ವಾಗತಿಸಿದರು. ಜೀರ್ಣೋದ್ಧಾರ ಸಮಿತಿಯ ಜೊತೆ ಕಾರ್ಯದರ್ಶಿ ಬಾಲಚಂದ್ರ ಡಿ.ಸಿ. ವಂದಿಸಿದರು.ಶಿಕ್ಷಕ ಅಚ್ಯುತ ಅಟ್ಲೂರು ಕಾರ್ಯಕ್ರಮ ನಿರೂಪಿಸಿದರು.