ಮಂಡೆಕೋಲು: ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಕಳೆದ ಆರು ತಿಂಗಳಿನಿಂದ ಗ್ರಾಮೀಣ ಕನ್ನಡ ಮಾಧ್ಯಮ ಶಾಲಾ ಮಕ್ಕಳಿಗೆ ಉಚಿತ ಸ್ಪೋಕನ್ ಇಂಗ್ಲಿಷ್ ಹಾಗೂ ಕಮ್ಯುನಿಕೇಷನ್ ಸ್ಕಿಲ್ ತರಗತಿ ನಡೆಸಿಕೊಂಡು ಬರುತ್ತಿದ್ದು, ಈ ವಾರ್ಷಿಕ ಅವಧಿಯ ಕೊನೆಯ ಹಿನ್ನೆಲೆಯಲ್ಲಿ ತರಗತಿಗೆ ಬರುತ್ತಿದ್ದ ಮಕ್ಕಳ
ಪ್ರತಿಭಾ ಅನಾವರಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉಧ್ಘಾಟನೆಯನ್ನು ನಿವೃತ್ತ ಯೋಧ ಹರಿಶ್ಚಂದ್ರ ಬೊಳುಗಲ್ಲು ನೆರವೇರಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಂಥಾಲಯ ಸಮಿತಿ ಸದಸ್ಯರೂ ಮಂಡೆಕೋಲು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಸುರೇಶ್ ಕಣೆಮರಡ್ಕ ವಹಿಸಿದ್ದರು. ವೇದಿಕೆಯಲ್ಲಿ ಸ್ಪೋಕನ್ ಇಂಗ್ಲಿಷ್ ಶಿಕ್ಷಕಿ ಗೀತಾಂಜಲಿ ಬಿ.ಎಸ್, ಮಂಡೆಕೋಲು ಶಾಲಾ ಆಂಗ್ಲ ಭಾಷಾ ಶಿಕ್ಷಕರಾದ ರಮೇಶ್, ಮಾಜಿ ಗ್ರಾ.ಪಂ ಉಪಾಧ್ಯಕ್ಷ ಅನಿಲ್ ತೋಟಪ್ಪಾಡಿ, ಗ್ರಂಥಾಲಯ ಮೇಲ್ವಿಚಾರಕಿ ಸಾವಿತ್ರಿ ಕಣೆಮರಡ್ಕ ಉಪಸ್ಥಿತರಿದ್ದರು.
ಗೀತಾಂಜಲಿ ಬಿ.ಎಸ್ ಅವರನ್ನು ಸನ್ಮಾನಿಸಲಾಯಿತು. ಸಭಾ ಕಾರ್ಯಕ್ರಮದ ಬಳಿಕ ಮಕ್ಕಳಿಂದ ವಿವಿಧ ಪ್ರತಿಭಾ ಪ್ರದರ್ಶನ ನಡೆಯಿತು.ವಿದ್ಯಾರ್ಥಿಗಳಾದ ವರುಣ್ ಸ್ವಾಗತಿಸಿ, ಮನ್ವಿತ್ ವಂದಿಸಿದರು.ಶ್ರದ್ಧಾ ಹಾಗೂ ತನ್ವಿತ್ ರೈ ಅನಿಸಿಕೆ ವ್ಯಕ್ತ ಪಡಿಸಿದರು.ವೃಶಾಲಿ ಕೆ.ಎಸ್ ಕಾರ್ಯಕ್ರಮ ನಿರೂಪಿಸಿದರು.









