ಮಂಡೆಕೋಲು: ಮಂಡೆಕೋಲು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಧವಳಧಾರೆಯ ಉದ್ಘಾಟನೆ ಸಮಾರಂಭ ಡಿ.24ರಂದು ನಡೆಯಿತು.ನೂತನ ಕಟ್ಟಡ ಧವಳಧಾರೆಯನ್ನು ದ.ಕ.ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷ ಎಸ್.ಬಿ. ಜಯರಾಮ ರೈ ಬಳಜ್ಜ ಉದ್ಘಾಟಿಸಿದರು.ಶಾಸಕಿ ಭಾಗೀರಥಿ ಮುರುಳ್ಯ ಸಭಾ ಕಾರ್ಯಕ್ರಮವನ್ನು
ಉದ್ಘಾಟಿಸಿದರು. ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸದಾನಂದ ಮಾವಜಿ ಅಧ್ಯಕ್ಷತೆ ವಹಿಸಿದ್ದರು.ದ.ಕ. ಜಿಲ್ಲಾ ಹಾಲು ಒಕ್ಕೂಟ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ ಒಕ್ಕೂಟದಿಂದ ಮಂಡೆಕೋಲು ಹಾಲು ಸಹಕಾರ ಸಂಘಕ್ಕೆ ದೇಣಿಗೆ ಹಸ್ತಾಂತರಿಸಿದರು.ಒಕ್ಕೂಟದ
ನಿರ್ದೆಶಕರುಗಳಾದ ಪದ್ಮನಾಭ ಶೆಟ್ಟಿ ಆರ್ಕಜೆ, ಸವಿತಾ ಎನ್.ಶೆಟ್ಟಿ, ದ.ಕ. ಜಿಲ್ಲಾ ಹಾಲು ಒಕ್ಕೂಟದ ಶೇಖರಣೆ ಮತ್ತು ತಾಂತ್ರಿಕ ವಿಭಾಗದ ವ್ಯವಸ್ಥಾಪಕರಾದ ರವಿರಾಜ ಉಡುಪ, ಉಪ ವ್ಯವಸ್ಥಾಪಕರಾದ ಡಾ. ಸತೀಶ್ ರಾವ್, ಸುಳ್ಯ ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕರಾದ ಡಾ.ನಿತೀನ್ ಪ್ರಭು, ಮಂಡೆಕೋಲು ಗ್ರಾಮ
ಪಂಚಾಯತ್ ಅಧ್ಯಕ್ಷ ಕುಶಲ ಉದ್ದಂತಡ್ಕ, ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿ ಅಧ್ಯಕ್ಷ ಪಿ.ಸಿ.ಜಯರಾಮ್, ಮಂಡೆಕೋಲು ಸಹಕಾರ ಸಂಘದ ಅಧ್ಯಕ್ಷ ರಾಮಕೃಷ್ಣ ರೈ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮಾಧವ ಗೌಡ, ಉಪತಹಶೀಲ್ದಾರ್ ಚಂದ್ರಕಾಂತ್ ಎಂ.ಆರ್., ನೂತನ ಕಟ್ಟಡ ಸಮಿತಿಯ ತಾಂತ್ರಿಕ ಸಲಹೆಗಾರ ಶ್ಯಾಮ್ ಪ್ರಸಾದ್ ಅಡ್ಡಂತಡ್ಕ ಮುಖ್ಯ ಅತಿಥಿಗಳಾಗಿದ್ದರು.ಸಂಘದ ಅಧ್ಯಕ್ಷ ಸದಾನಂದ ಮಾವಜಿ ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು. ಕಾರ್ಯದರ್ಶಿ ಪುಷ್ಪಾವತಿ ಎಂ. ವರದಿ ಮಂಡಿಸಿದರು. ಸುರೇಶ್ ಕಣೆಮರಡ್ಕ ಕಾರ್ಯಕ್ರಮ ನಿರೂಪಿಸಿದರು.