ಮಂಡೆಕೋಲು:ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ಜಿಲ್ಲಾ ಮಟ್ಟದ 73ನೇ ಸಹಕಾರ ಸಪ್ತಾಹದ ಉದ್ಘಾಟನಾ ಸಮಾರಂಭ ನ.14ರಂದು ಮಂಡೆಕೋಲು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ನಡೆಯಲಿದೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು, ಸುಳ್ಯ ತಾಲೂಕು ಸಹಕಾರಿ ಯೂನಿಯನ್, ಸುಳ್ಯ ತಾಲೂಕಿನ
ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ಇತರ ಸಹಕಾರ ಸಂಘಗಳ ಸಹಕಾರದೊಂದಿಗೆ ನಡೆಯುವ ಕಾರ್ಯಕ್ರಮಕ್ಕೆ ಮಂಡೆಕೋಲು ಸಹಕಾರ ಸಂಘದ ಮಾಜಿ ಅಧ್ಯಕ್ಷ ಪಾಂಡುರಂಗ ರಾವ್ ಚಾಲನೆ ನೀಡಲಿದ್ದಾರೆ. ಸಪ್ತಾಹದ ಅಂಗವಾಗಿ ಆಕರ್ಷಕ ಜಾಥಾ ನಡೆಯಲಿದ್ದು ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿರ್ದೇಶಕ ಎಸ್.ಎನ್.ಮನ್ಮಥ ಜಾಥಾದ ಉದ್ಘಾಟನೆ ನೆರವೇರಿಸುವರು. ಸಹಕಾರ ಧ್ವಜಾರೋಹಣವನ್ನು ಮಂಡೆಕೋಲು ಸಹಕಾರ ಸಂಘದ ಅಧ್ಯಕ್ಷ ಸುರೇಶ್ ಕಣೆಮರಡ್ಕ ನೆರವೇರಿಸುವರು.ದ.ಕ. ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಹಾಗೂ

ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಗೊಟ್ಟು ಸಭಾಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಕ್ಯಾ.ಬ್ರಿಜೇಶ್ ಚೌಟ ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕಿ ಭಾಗೀರಥಿ ಮುರುಳ್ಯ ವಸ್ತು ಪ್ರದರ್ಶನ ಉದ್ಘಾಟಿಸಲಿದ್ದಾರೆ.ಸಹಕಾರ ಕೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಮತ್ತು ಸಹಕಾರ ಸಂಘದ ಮಾಜಿ ಅಧ್ಯಕ್ಷರುಗಳಿಗೆ ಮತ್ತು ಸುಳ್ಯ ತಾಲೂಕಿನಲ್ಲಿ 2025 – 26ನೇ ಸಾಲಿನಲ್ಲಿ ನಿವೃತ್ತರಾದ ಸಿಬ್ಬಂದಿಗಳಿಗೆ ಗೌರವಾರ್ಪಣೆ ನಡೆಯಲಿದೆ. ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ಸನ್ಮಾನ ನೆರವೇರಿಸುವರು. ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ 2027ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಮಾಡುವರು.ಕ್ರೀಡೋತ್ಸವದಲ್ಲಿ ವಿಜೇತರಾದವರಿಗೆ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಬಹುಮಾನ ವಿತರಣೆ ಮಾಡಲಿದ್ದಾರೆ.ಬಳಿಕ

ಸುಸ್ಥಿರ ಅಭಿವೃದ್ಧಿ ಮತ್ತು ಬೆಳವಣಿಗೆಯಲ್ಲಿ ಸಹಕಾರ ಸಂಸ್ಥೆಗಳ ಪಾತ್ರ ವಿಷಯದಲ್ಲಿ ವಿಚಾರಗೋಷ್ಠಿ ನಡೆಯಲಿದೆ. ಪುತ್ತೂರು ಸೈಂಟ್ ಫಿಲೋಮಿನ ಕಾಲೇಜು ಸಹಾಯಕ ಪ್ರಾಧ್ಯಾಪಕ ಸಂತೋಷ್ ಶೆಟ್ಟಿ ಮಾಡಲಿದ್ದಾರೆ.ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ವಿಷ್ಣು ಭಟ್ ಮೂಲೆತೋಟ, ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಭರತ್ ನೆಕ್ರಾಜೆ, ಸಹಕಾರ ಸಂಘಗಳ ಉಪನಿಬಂಧಕ ರಮೇಶ್ ಎಚ್.ಎನ್.,ಸಹಕಾರ ಸಂಘಗಳ ಸಹಾಯ ನಿಬಂಧಕ ಎಸ್.ಎಂ.ರಘು, ಸುಳ್ಯ ತಾಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ಶಿವಲಿಂಗಯ್ಯ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಕ್ಯಾಂಪ್ಕೋ ನಿರ್ದೇಶಕ ಎ.ವಿ.ತೀರ್ಥರಾಮ, ಸುಳ್ಯ ಭೂ ಅಭಿವೃದ್ಧಿ ಬ್ಯಾಂಕ್ ಮಾಜಿ ಅಧ್ಯಕ್ಷ ಪ್ರಭಾಕರ ನಾಯಕ್, ಡಿಸಿಸಿ ಬ್ಯಾಂಕ್ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ವಿಶ್ವನಾಥ ನಾಯರ್, ಮಂಗಳೂರು ಲೆಕ್ಕ ಪರಿಶೋಧನಾ ಇಲಾಖೆಯ ಸಹಕಾರ ಸಂಘಗಳ ನಿವೃತ್ತ ಹಿರಿಯ ಉಪನಿರ್ದೇಶಕ ಬಾಲಸುಬ್ರಹ್ಮಣ್ಯ ಭಟ್ ಅವರನ್ನು ಸನ್ಮಾನಿಸಲಾಗುವುದು.ಅಪರಾಹ್ನ
2.30ರಿಂದ ಕಾಳು ಮೆಣಸು, ಕಾಫಿ ಹಾಗೂ ಉಪಬೆಳೆಗಳ ನಾಟಿ ಮತ್ತು ಪೋಷಣೆ ಬಗ್ಗೆ ಕೃಷಿಕರಾದ ಸುರೇಶ್ ಬಲ್ನಾಡ್ ಮಾಹಿತಿ ನೀಡಲಿದ್ದಾರೆ. ಅಪರಾಹ್ನ 3.30ರಿಂದ ನವೋದಯ ಸ್ವಸಹಾಯ ತಂಡದ ಸದಸ್ಯರಿಂದ ಹಾಗೂ ಊರವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುವುದು. ಸಂಜೆ 6.30ರಿಂದ ಶಾರದಾ ಆರ್ಟ್ಸ್ ಕಲಾವಿದೆರ್ ಮಂಜೇಶ್ವರ ಇವರಿಂದ ತುಳು ಸಾಮಾಜಿಕ ಹಾಸ್ಯಮಯ ನಾಟಕ ಎನ್ನ ಫ್ಯಾಮಿಲಿ ಮೂಡಿಬರಲಿದೆ ಎಂದು ಮಂಡೆಕೋಲು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸುರೇಶ್ ಕಣೆಮರಡ್ಕ ಹಾಗು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉದಯಕುಮಾರ್ ಜಿ. ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
“ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ಜಿಲ್ಲಾ ಮಟ್ಟದ 73ನೇ ಸಹಕಾರ ಸಪ್ತಾಹದ ಉದ್ಘಾಟನೆ ನ.14ರಂದು ಮಂಡೆಕೋಲು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ನಡೆಯಲಿದೆ. ಸಹಕಾರಿಗಳು, ಕೃಷಿಕರು, ಸಾರ್ವಕನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ವಿನಂತಿಸುತ್ತೇವೆ”
-ಸುರೇಶ್ ಕಣೆಮರಡ್ಕ.
ಅಧ್ಯಕ್ಷರು
ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ.
































