ಮಂಡೆಕೋಲು:ಮಂಡೆಕೋಲು ಗ್ರಾಮದ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ಮೇ.1ರಂದು ನಡೆಯಿತು. ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ಬ್ರಹ್ಮಶ್ರೀ ಕುಂಟಾರು ವಾಸುದೇವ ಹಾಗೂ ವೇದಮೂರ್ತಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳ ನೇತ್ರತ್ವದಲ್ಲಿ ಪುನರ್ ಪ್ರತಿಷ್ಠೆ ಹಾಗೂ
ಬ್ರಹ್ಮ ಕಲಶಾಭಿಷೇಕ ನಡೆಯಿತು. ಬೆಳಗ್ಗೆ 5.30 ರಿಂದ 108 ತೆಂಗಿನಕಾಯಿಯ ಗಣಪತಿ ಹೋಮ, ಪ್ರತಿಷ್ಠಾ ಪಾಣಿ ಕಾರ್ಯಕ್ರಮ ನಡೆಯಿತು. ಬಳಿಕ ಪೂ.10.18ರ ಮಿಥುನ ಲಗ್ನದ ಸುಮುಹೂರ್ತದಲ್ಲಿ ಶ್ರೀ ದೇವರ ಪುನರ್ ಪ್ರತಿಷ್ಠೆ ಮತ್ತು ದುರ್ಗಾಂಬಿಕೆ ದೇವಿ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ, ಪ್ರತಿಷ್ಠಾ ಬಲಿ, ಮಹಾಪೂಜೆ, ಮಹಾ ಮಂತ್ರಾಕ್ಷತೆ ಹಾಗೂ ಇನ್ನಿತರ ಕಾರ್ಯಕ್ರಮಗಳು ನಡೆಯಿತು.
ಏ.26ರಿಂದ ಆರಂಭಗೊಂಡ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಇಂದು ಪುನರ್ ಪ್ರತಿಷ್ಠೆ ಬ್ರಹ್ಮಕಲಶಾಭಿಷೇಕ ನಡೆಯುವುದರೊಂದಿಗೆ ಸಂಪನ್ನಗೊಂಡಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೇಶವಮೂರ್ತಿ ಹೆಬ್ಬಾರ್, ದೇಗುಲದ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಪುಂಡರೀಕ ಹೆಬ್ಬಾರ್, ಅಧ್ಯಕ್ಷ ಸದಾನಂದ ಮಾವಜಿ, ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಮಾಸ್ತರ್ ಕೇನಾಜೆ, ಬ್ರಹ್ಮಕಲಶೋತ್ಸವ ಸಮಿತಿಯ
ಅಧ್ಯಕ್ಷ ಶಿವಪ್ರಸಾದ್ ಉಗ್ರಾಣಿಮನೆ, ಪ್ರಧಾನ ಕಾರ್ಯದರ್ಶಿ ಸುರೇಶ್ ಕಣೆಮರಡ್ಕ, ಕಣೆಮರಡ್ಕ ವಿಷ್ಣುಮೂರ್ತಿ ದೈವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಪೂರ್ಣಚಂದ್ರ ಕಣೆಮರಡ್ಕ, ವ್ಯವಸ್ಥಾಪನಾ ಸಮಿತಿ ಸದಸ್ಯರು, ಜೀರ್ಣೋದ್ಧಾರ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಊರ ಹಾಗೂ ಪರವೂರ ಸಾವಿರಾರು ಮಂದಿ ಭಕ್ತರು ಹರಿದು ಬಂದರು. ನೆರೆದ ಸಾವಿರಾರು ಭಲ್ತರು ಬ್ರಹ್ಮಕಲಶೋತ್ಸವ ಕಣ್ತುಂಬಿಕೊಂಡರು.