ಮಂಡೆಕೋಲು: ಮಂಡೆಕೋಲು ಗ್ರಾಮದ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಪೂರ್ವಭಾವಿ ಸಭೆ.ಭಾನುವಾರ ದೇವಸ್ಥಾನದ ಪ್ರಾಂಗಣದಲ್ಲಿ ನಡೆಯಿತು. ಇದೇ ವೇಳೆ ಬ್ರಹ್ಮಕಲಶೋತ್ಸವ ಪ್ರಯುಕ್ತ ರಚಿಸಲಾದ ವಿವಿಧ ಉಪ ಸಮಿತಿಗಳ ಪ್ರಮುಖರ ಸಭೆ ಕರೆದು ಮುಂದಿನ ಕಾರ್ಯಕ್ರಮಗಳಲ್ಲಿ
ತೊಡಗಿಸಿಕೊಳ್ಳಲು ಸೂಚಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಯಿತು.ಸಲಹೆ, ಸೂಚನೆಗಳನ್ನು ಸಭೆಯಲ್ಲಿ ನೀಡಲಾಯಿತು.ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಾಂತ ಸಹ ಸೇವಾ ಪ್ರಮುಖ್ ನ. ಸೀತಾರಾಮ ಮಾತನಾಡಿದರು.
ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಶಿವಪ್ರಸಾದ್ ಉಗ್ರಾಣಿಮನೆ ಸಭೆಯ ಅಧ್ಯಕ್ಷತೆ ವಹಿಸಿದ್ದರು. ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸದಾನಂದ ಮಾವಜಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಿತಿಯ ಪ್ರಧಾನ ಕಾರ್ಯದರ್ಶಿ ಸುರೇಶ್ ಕಣೆಮರಡ್ಕ, ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಮಾಸ್ತರ್, ಕಣೆಮರಡ್ಕ ದೈವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಪೂರ್ಣಚಂದ್ರ ಕಣೆಮರಡ್ಕ ಮೊದಲಾದವರು ಸಭೆಯಲ್ಲಿ ಉಪಸ್ಥಿತರಿದ್ದರು.