ಮಂಡೆಕೋಲು:ಮಂಡೆಕೋಲು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮವನ್ನು ಮಂಡೆಕೋಲು ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನಿಕಟ ಪೂರ್ವಾಧ್ಯಕ್ಷರಾದ ಕೇಶವಮೂರ್ತಿ ಹೆಬ್ಬಾರ್ ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು

ಎಸ್ ಡಿ ಎಂ ಸಿ ಅಧ್ಯಕ್ಷರಾದ ಸುರೇಶ್ ಕಣೆಮರಡ್ಕ ವಹಿಸಿದ್ದರು. ನಿವೃತ್ತ ಯೋಧ ಶೇಖರ ಮಣಿಯಾಣಿ, ಶಾಲಾ ಮುಖ್ಯೋಪಾಧ್ಯಾಯಿನಿ ಮಂಜುಳಾ ಅತ್ಯಾಡಿ, ಎಸ್ ಡಿ ಎಂ ಸಿ ಸದಸ್ಯ ದಾಮೋದರ ಮುಡೂರು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯಿನಿ ಮಂಜುಳಾ ಅತ್ಯಾಡಿ ಸ್ವಾಗತಿಸಿ ದೈಹಿಕ ಶಿಕ್ಷಕಿ ವನಿತಾಕುಮಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಶಾಲಾ ಸಹಶಿಕ್ಷಕರಾದ ರಮೇಶ್ ಕಾರ್ಯಕ್ರಮ ನಿರೂಪಿಸಿದರು. ಸಭಾಕಾರ್ಯಕ್ರಮದ ಬಳಿಕ ವಿಧ್ಯಾರ್ಥಿಗಳಿಂದ ಯೋಗ ಪ್ರದರ್ಶನ ನಡೆಯಿತು.