ಮಂಗಳೂರು: ಮಂಗಳೂರು ಮತ್ತು ಬೆಂಗಳೂರನ್ನು ಸಂಪರ್ಕಿಸುವ ಮುಖ್ಯ ಎರಡು ರಾಷ್ಟೀಯ ಹೆದ್ದಾರಿಗಳಲ್ಲಿ ಗುಡ್ಡ ಕುಸಿತದಿಂದ ವಾಹನ ಸಂಚಾರಕ್ಕೆ ಸಮಸ್ಯೆಯಾಗಿದ್ದು, ಮಂಗಳೂರು- ಬೆಂಗಳೂರು ನಡುವೆ ಹೆಚ್ಚುವರಿ ರೈಲು ಸೇವೆಯನ್ನು ತುರ್ತಾಗಿ ಪ್ರಾರಂಭಿಸುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯಿಸಿದ್ದಾರೆ.ನೈಋತ್ಯ ರೈಲ್ವೆ ಜನರಲ್ ಮ್ಯಾನೇಜರ್ ಮತ್ತು
ಮೈಸೂರು ಡಿಆರ್ಎಂ ಅವರಿಗೆ ಈ ಸಂಬಂಧ ಸಂಸದರು ಪತ್ರ ಬರೆದಿದ್ದಾರೆ.ಮಂಗಳೂರು- ಬೆಂಗಳೂರು ನಗರಗಳ ನಡುವೆ ಪ್ರತಿನಿತ್ಯ ಹೆಚ್ಚು ಜನರು ಪ್ರಯಾಣಿಸುತ್ತಾರೆ. ಇದನ್ನು ಗಮನದಲ್ಲಿಟ್ಟುಕೊಂಡು, ಯಾವುದೇ ಇತರ ಸಾರಿಗೆ ವ್ಯವಸ್ಥೆಯಿಲ್ಲದ ಕಾರಣ ಹೆಚ್ಚುವರಿ ರೈಲು ಸೇವೆಯನ್ನು ಒದಗಿಸುವ ಅಗತ್ಯವಿದೆ. ಶೀಘ್ರದಲ್ಲಿ ಹೆಚ್ಚುವರಿ ರೈಲ್ವೆ ಸೇವೆ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಚೌಟ ವಿನಂತಿಸಿದ್ದಾರೆ.