ಮಂಗಳೂರು: ಮಂಗಳೂರು ಸೆಂಟ್ರಲ್- ಕಾಸರಗೋಡು- ತಿರುವನಂತಪುರಂ ವಿಸ್ತರಿತ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಮಂಗಳವಾರ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ವೀಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು.ದೇಶದಲ್ಲಿ
10 ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಪ್ರಧಾನಿ ಚಾಲನೆ ನೀಡಿದರು. ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ವಂದೇ ಭಾರತ್ ರೈಲಿಗೆ ಗ್ರೀನ್ ಸಿಗ್ನಲ್ ನೀಡಿದರು.
ಈ ಸಂದರ್ಭ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಶಾಸಕ ಡಿ.ವೇದವ್ಯಾಸ ಕಾಮತ್, ವಿಧಾನ ಪರಿಷತ್ ವಿಪಕ್ಷ ಉಪ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.









