ಸುಳ್ಯ: ಮಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಉದ್ಘಾಟನೆ ಮತ್ತು ವಿವಿಧ ಇಲಾಖೆಗಳ ಸೌಲಭ್ಯ ವಿತರಣೆ ಕಾರ್ಯಕ್ರಮಕ್ಕೆ ಸುಳ್ಯದಿಂದ ಪಲಾನುಭವಿಗಳನ್ನು ಮಂಗಳೂರಿಗೆ ಕರೆದುಕೊಂಡು ಹೋಗುವ ಮತ್ತು ಅವರಿಗೆ ಉಟೋಪಚಾರ ವ್ಯವಸ್ಥೆಯ ಬಗ್ಗೆ ಸುಳ್ಯ ಬ್ಲಾಕ್ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ರಾಧಾಕೃಷ್ಣ ಬೊಳ್ಳೂರು ಅವರು ಸುಳ್ಯ ತಹಶೀಲ್ದಾರ್ ಮತ್ತು
ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಿ ಕಾರ್ಯಕ್ರಮದ ಪೂರ್ವತಯಾರಿ ಕುರಿತು ಮಾಹಿತಿ ಪಡೆದರು. ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಬಂದ ಮೇಲೆ ಕಂದಾಯ ಇಲಾಖೆಯಲ್ಲಿ ಕಳೆದ ಹತ್ತಾರು ವರ್ಷಗಳಿಂದ ಪ್ಲಾಟಿಂಗ್ ಸಮಸ್ಯೆ ಯಿಂದ ಬಾಕಿ ಉಳಿದಿರುವ ಆಸ್ತಿಗಳನ್ನು ಉಚಿತವಾಗಿ ಪೋಡಿ ಮುಕ್ತ ಯೋಜನೆ ಮುಖಾಂತರ ತ್ವರಿತವಾಗಿ ಪ್ಲಾಟಿಂಗ್ ನಡೆಸಿ ಸುಳ್ಯದಲ್ಲಿ ಈಗಾಗಲೇ 424 ಪಲಾನುಭವಿಗಳ ಕಡತಗಳು ಸಂಪೂರ್ಣ ಗೊಂಡಿರುತ್ತದೆ. ಈ ಎಲ್ಲಾ ಪಲಾನುಭವಿಗಳು ಮತ್ತು ವಿವಿಧ ಇಲಾಖೆಗಳ ಪಲಾನುಭವಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಮಂಗಳೂರಿನಲ್ಲಿ ಸೌಲಭ್ಯ ವಿತರಣೆ ಮಾಡಲಿದ್ದಾರೆ ಎಂದು ರಾಧಾಕೃಷ್ಣ ಬೊಳ್ಳೂರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯ ಭವಾನಿಶಂಕರ್ ಕಲ್ಮಡ್ಕ ಇದ್ದರು.