ಮಂಗಳೂರು: ಮನೆಯ ಹಿಂಬದಿಯಲ್ಲಿದ್ದ ಕಂಪೌಂಡ್ ಮನೆಯ ಮೇಲೆ ಕುಸಿದು ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಮದನಿ ನಗರ ಎಂಬಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದೆ.
ಮನೆಯೊಳಗೆ
ವಾಸ್ತವ್ಯವಿದ್ದ ಯಾಸಿರ್(45),ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಹಾನ (14) ಮತ್ತು ರಿಫಾನ (16) ಮೃತರು.ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅವಘಡ ಸಂಭವಿಸಿದೆ.
ರಾತ್ರಿಯಿಡೀ ಮಳೆಯಾದ ಪರಿಣಾಮ ಕಂಪೌಂಡ್ ವಾಲ್ ಯಾಸಿರ್ ಅವರ ಮನೆ ಮೇಲೆ ಉರುಳಿಬಿದ್ದಿದೆ.
ಮೂರು ಗಂಟೆಗಳ ಕಾರ್ಯಾಚರಣೆ ಬಳಿಕ ನಾಲ್ಕು ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ತಿಳಿದು ಬಂದಿದೆ