ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಬಿಜೆಪಿಯ ಸುಧೀರ್ ಶೆಟ್ಟಿ ಹಾಗೂ ಉಪಮೇಯರ್ ಆಗಿ ಸುನೀತಾ ಆಯ್ಕೆಯಾಗಿದ್ದಾರೆ.ಮಂಗಳೂರು ಮಹಾನಗರ ಪಾಲಿಕೆಯ
24ನೇ ಅವಧಿಯ ಮೇಯರ್ , ಉಪಮೇಯರ್ ಹಾಗೂ 4 ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದು ಮಂಗಳೂರು ಮಹಾನಗರ ಪಾಲಿಕೆಯ ಮಂಗಳ ಸಭಾಂಗಣದಲ್ಲಿ ಚುನಾವಣೆ ನಡೆಯಿತು. ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಡಾ.ಜಿ.ಸಿ.ಪ್ರಕಾಶ್ ಚುನಾವಣೆ ನಡೆಸಿಕೊಟ್ಟರು. ಅಲ್ಲದೆ 4 ಸ್ಥಾಯಿ ಸಮಿತಿಗಳಿಗೆ ತಲಾ 7 ಮಂದಿ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಪ್ರಾದೇಶಿಕ ಆಯುಕ್ತರು ತಿಳಿಸಿದರು.