ಮಂಗಳೂರು:ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಮಹೋತ್ಸವದ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸೋಮವಾರ ಚಾಲನೆ ನೀಡಲಾಯಿತು. ಒಂಬತ್ತು ದಿನಗಳ ಕಾಲ ಆರಾಧನೆಗೊಳ್ಳಲಿರುವ ನವದುರ್ಗೆಯರು, ಮಹಾಗಣಪತಿ, ಆದಿಶಕ್ತಿ ಹಾಗೂ ಶ್ರೀ ಶಾರದಾ ಮಾತೆಯ ಪ್ರತಿಷ್ಠಾಪನೆಯಾಗಿ, ಪೂಜೆ ನೆರವೇರಿತು. ಕೇಂದ್ರದ
ಮಾಜಿ ಸಚಿವ ಹಾಗೂ ಕ್ಷೇತ್ರದ ಅಭಿವೃದ್ಧಿಯ ರುವಾರಿ ಬಿ. ಜನಾರ್ದನ ಪೂಜಾರಿಯವರ ಸಮ್ಮುಖದಲ್ಲಿ, ಮಂಗಳೂರು ರಾಮಕೃಷ್ಣ ಮಿಶನ್ ಅಧ್ಯಕ್ಷ ಜಿತಕಾಮಾನಂದಜಿ ಮಹಾರಾಜ್ ಹಾಗೂ ಮಂಗಳೂರು ಬ್ರಹ್ಮಕುಮಾರೀಸ್ ಸಂಸ್ಥೆಯ ಮುಖ್ಯಸ್ಥೆ ಬಹ್ಮಕುಮಾರಿ ವಿಶ್ವೇಶ್ವರಿ ಜೀ ರವರು ಚಾಲನೆ ನೀಡಿದರು. ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ ಮಾತನಾಡಿ, ಕ್ಷೇತ್ರದಲ್ಲಿ ಸಂಭ್ರಮದ ಮಂಗಳೂರು ದಸರಾ ಈ ವರ್ಷ ಮತ್ತಷ್ಟು ಅದ್ದೂರಿಯಾಗಿ ನಡೆಯುತ್ತಿದ್ದು, ಜನರು ತಂಡೋಪತಂಡವಾಗಿ ಆಗಮಿಸುತ್ತಲಿದ್ದಾರೆ ಎಂದು ಹೇಳಿದರು.
ಮಾಲತಿ ಜನಾರ್ಧನ ಪೂಜಾರಿ, ಸಂತೋಷ್ ಪೂಜಾರಿ, ಸಂಸದ ಕ್ಯಾ. ಬೃಜೇಶ್ ಚೌಟ, ಶಾಸಕರಾದ ಉಮಾನಾಥ್ ಕೋಟ್ಯಾನ್ ಹಾಗೂ ವೇದವ್ಯಾಸ್ ಕಾಮತ್, ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ, ಉಪಾಧ್ಯಕ್ಷೆ ಉರ್ಮಿಳಾ ರಮೇಶ್, ಕಾರ್ಯದರ್ಶಿ ಬಿ. ಮಾಧವ ಸುವರ್ಣ, ಹರಿಕೃಷ್ಣ ಬಂಟ್ವಾಳ್, ರಾಜ್ಯ ಹಿಂದುಳಿದ ವರ್ಗದ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ, ಕಿರಣ್ ಕುಮಾರ್ ಕೋಡಿಕಲ್, ದೇವಳದ ಆಡಳಿತ ಮಂಡಳಿಯ ಪ್ಧಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.





