ಸುಳ್ಯ:ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಕಬಡ್ಡಿ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜು ಮೂಡಬಿದಿರೆ ಪ್ರಥಮ ಹಾಗೂ ಎಸ್.ಡಿ.ಎಂ ಕಾಲೇಜು ಉಜಿರೆ ದ್ವಿತೀಯ ಪ್ರಶಸ್ತಿಯನ್ನು ಪಡೆದುಕೊಂಡಿತು.ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ನಡೆದ ಪಂದ್ಯಾಟದಲ್ಲಿ ಮೊದಲು ಅಂತರ ಕಾಲೇಜು ಮಂಗಳೂರು ವಲಯದ
ಪಂದ್ಯಾಟಗಳು ನಡೆದು ಎಸ್.ಡಿ.ಎಂ ಕಾಲೇಜು ಉಜಿರೆ ಪ್ರಥಮ ಹಾಗೂ ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತ್ತು. ಮಿಲಾಗ್ರೀಸ್ ಕಾಲೇಜು ಮಂಗಳೂರು ತೃತೀಯ ಮತ್ತು ಗೋಕರ್ಣನಾಥೇಶ್ವರ ಕಾಲೇಜು ಮಂಗಳೂರು ಚತುರ್ಥ ಸ್ಥಾನವನ್ನು ಪಡೆದುಕೊಂಡಿತ್ತು. ಮೂರನೇ ದಿನ ನಡೆದ ಅಂತರ ವಲಯ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜು ಮೂಡಬಿದಿರೆ ಪ್ರಥಮ ಹಾಗೂ ಎಸ್.ಡಿ.ಎಂ ಕಾಲೇಜು ಉಜಿರೆ ದ್ವಿತೀಯ, ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ತೃತೀಯ ಮತ್ತು ಮಿಲಾಗ್ರೀಸ್ ಕಾಲೇಜು ಮಂಗಳೂರು ಚತುರ್ಥ ಸ್ಥಾನವನ್ನು ಪಡೆದುಕೊಂಡವು.










